Header Ads
Header Ads
Breaking News

ಮಂಗಳೂರು ಯುವತಿಯ ಗ್ಯಾಂಗ್ ರೇಪ್ ಪ್ರಕರಣ:ಪ್ರಕರಣ ಭೇದಿಸಿದ ಪೊಲೀಸರಿಗೆ ಸಚಿವರಿಂದ ಬಹುಮಾನ

ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು 24ಗಂಟೆಯಲ್ಲಿ ಭೇದಿಸಿ, ತಡವಾಗಿ ಬೆಳಕಿಗೆ ಬಂದ ಪ್ರಕರಣಕ್ಕೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾದ ಮಂಗಳೂರು ನಗರ ಪೊಲೀಸರನ್ನು ಉಸ್ತುವಾರಿ ಸಚಿವ ಯುಟಿ ಖಾದರ್ ಅವರು ಮಂಗಳೂರಿನಲ್ಲಿ ಅಭಿನಂದಿಸಿದರು. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮಂಗಳೂರು ನಗರ ಪೊಲೀಸ್ ಆಯಕ್ತರಿಗೆ 1 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸುವ ಮೂಲಕ ಅಭಿನಂದಿಸಿದರು.

ಪಣಂಬೂರು ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರಫೀಕ್ , ಉತ್ತರ ಉಪವಿಭಾಗದ ರೌಡಿ ನಿಗ್ರಹದಳದ ಸಿಬ್ಬಂದಿಗಳನ್ನು ಸಚಿವ ಖಾದರ್ ಅಭಿನಂದಿಸಿದರು. ಇದೇ ವೇಳೆ ಮಾತಾಡಿದ ಸಚಿವರು, ಮುಚ್ಚಿಹೋಗುವ ಹಂತದಲ್ಲಿದ್ದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ಚಿಯಾದ ಪೊಲೀಸರನ್ನು ಜಿಲ್ಲೆಯ ನಾಗರಿಕರ ಪರವಾಗಿ ಅಭಿನಂದಿಸುತ್ತಿದ್ದೇನೆ ಎಂದರು. ಅಲ್ಲದೇ ಸಂತ್ರಸ್ತೆ ಯುವತಿಗೂ ಸರಕಾರದ ಮೂಲಕ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಈಗಾಗಲೇ 4.12 ಲಕ್ಷ ರೂಪಾಯಿ ಪರಿಹಾರ ಮೊತ್ತ ನೀಡಲಾಗಿದೆ. ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಪರಿಹಾರ ಮೊತ್ತದ 4.13ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ನೀಡಲಾಗುವುದು ಎಂದರು.

Related posts

Leave a Reply