Header Ads
Header Ads
Breaking News

ಮಂಗಳೂರು: ರವೀಂದ್ರ ಕಲಾಭವನದಲ್ಲಿ ಮ್ಯಾನೇಜ್ಮೆಂಟ್ ಫೆಸ್ಟ್ ಯುನಿಫೆಸ್ಟ್-2019, ‘ಎಲಿಕ್ಸಿನ್’

ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ವತಿಯಿಂದ ವಿಶ್ವವಿದ್ಯಾನಿಲಯ ಮಟ್ಟದ ಸ್ನಾತಕೋತ್ತರ ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ಫೆಸ್ಟ್ ಯುನಿಫೆಸ್ಟ್-2019, ‘ಎಲಿಕ್ಸಿನ್’ ಎಂಬ ಶೀರ್ಷಿಕೆಯಡಿಯಲ್ಲಿ ರವೀಂದ್ರ ಕಲಾಭವನ ಸಂಕೀರ್ಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತ್ ಬೀಡಿ ವರ್ಕ್ಸ್ ಪ್ರೈವೇಟ್ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಜಿ ಪೈ, ಮಂಗಳೂರು ಶಿಕ್ಷಣ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಇಂತಹ ವೈವಿಧ್ಯಮಯ ಚಟುವಟಿಕೆಗಳು ನಮಗೆ ಮಾಹಿತಿಯ ಭಂಡಾರವನ್ನೇ ಒದಗಿಸುತ್ತವೆ, ಎಂದು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ ಉದಯ್ ಕುಮಾರ್ ಎಂ ಎ, ಅವರು ವಹಿಸಿದ್ದರು. ಮುಖ್ಯ ಅತಿಥಿಗಳು ಹಾಗೂ ಪ್ರಾಂಶುಪಾಲರು ‘ಯುನಿಫೆಸ್ಟ್ 2019’ ಇದರ ಟ್ರೋಫಿಯನ್ನು ಅನಾವರಣಗೊಳಿಸಿದರು. ಅನಂತ ಜಿ ಪೈಯವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ವಾಣಿಜ್ಯ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ ಅಬೂಬಕ್ಕರ್ ಸಿದ್ಧಿಕ್, ವಿಭಾಗದ ಹಿರಿಯ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *