Header Ads
Breaking News

ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿದ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಮಂಗಳೂರಿನ ಬಜ್ಪೆಯ ಕೆಂಜಾರ್ ಬಳಿಯ ತ್ರಿ ಒನ್ ತ್ರಿ ಫ್ಲಾಟ್ ಎದುರುಗಡೆ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅವರು ದ.ಕ. ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆಗಬೇಕಿದ್ದರ ಶ್ರೀನಿವಾಸ ಮಲ್ಯರ ಕೊಡುಗೆ ಅಪಾರ. ಅಂತಹ ವಿಮಾನ ನಿಲ್ದಾಣವನ್ನು ಕೇಂದ್ರದ ಮೋದಿ ಸರ್ಕಾರ ಅದಾನಿಗೆ ಮಾರಾಟ ಮಾಡಿದೆ. ಇದು ದ.ಕ. ಜಿಲ್ಲೆಯ ಜನತೆಗೆ ಮಾಡಿದ ಮೋಸ ಎಂದು ಆಕ್ರೋಶ ವ್ಯಕ್ತಪಡಿಸಿದರು.ಆನಂತರ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ, ಶ್ರೀನಿವಾಸ ಮಲ್ಯ ಅವರ ಕಾಲದಲ್ಲಿ ಮಂಗಳೂರಿನಲ್ಲಿ ವಿಮಾನ ನಿಲ್ದಾಣವನ್ನು ಸ್ಥಾಪಿಸಲಾಯಿತು. ಆದರೆ ಇಂದು ವಿಮಾನ ನಿಲ್ದಾಣ ಸೇರಿದಂತೆ ಎಲ್ಲಾ ಕಂಪನಿಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡುಲು ಹೊರಟಿದೆ. ಹಂತ ಹಂತವಾಗಿ ಮಂಗಳೂರನ್ನು ನಶಿಸುವ ಕೆಲಸ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭ ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ವಕ್ತಾರ ಐವನ್ ಡಿಸೋಜಾ, ವಿಶ್ವಾಸ್‍ದಾಸ್ ಕುಮಾರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಶಾಲೆಟ್ ಪಿಂಟೋ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಹಾಜರಿದ್ದರು.

Related posts

Leave a Reply

Your email address will not be published. Required fields are marked *