Header Ads
Header Ads
Breaking News

ಮಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ. ಕ್ಯಾಂಪಸ್‌ಗೆ ಬಂದ ವ್ಯಕ್ತಿಯೋರ್ವನಿಂದ ಕಿರುಕುಳ. ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು.

ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಅಪರಿಚಿತ ವ್ಯಕ್ತಿಯೋರ್ವ ಅಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ ಪ್ರಕರಣವನ್ನು ಖಂಡಿಸಿ ವಿಶ್ವ ವಿದ್ಯಾನಿಲಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಡಿಢೀರ್ ಪ್ರತಿಭಟನೆ ನಡೆಸಿದರು.ನಿನ್ನೆ ಸಂಜೆ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರು ನಡೆದುಕೊಂದು ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಆಶ್ಲೀಲವಾಗಿ ವರ್ತಿಸಿ ಕಿರುಕುಳ ನೀಡಲು ಯತ್ನಿಸಿದ್ದಾನೆ.

ಈ ಬಗ್ಗೆ ವಿದ್ಯಾರ್ಥಿಯನಿಯರು ಕೂಡಲೇ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಆದರೆ ಕೃತ್ಯವನ್ನು ವಿಶ್ವವಿದ್ಯಾಲಯ ಆಡಳಿತ ಗಂಭೀರವಾಗಿ ಪರಿಗಣಿಸಿಲ್ಲ. ಘಟನೆ ನಡೆದು ಒಂದು ದಿನ ಕಳೆದರೂ ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಆಡಳಿತ ಕಚೇರಯದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

Related posts

Leave a Reply