Header Ads
Breaking News

ಮಂಗಳೂರು ವಿವಿ ಕಾಲೇಜಿನಲ್ಲಿ ‘ಡಿಜಿಟಲ್ ಇನ್ಫೋಮ್ಯಾಟಿಕ್ಸ್’ ಕಾರ್ಯಾಗಾರ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ‘ಡಿಜಿಟಲ್ ಇನ್ಫೋಮ್ಯಾಟಿಕ್ಸ್’ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಖೈಸರ್ ಎಂ. ಖಾನ್ ಉದ್ಘಾಟಿಸಿದ್ರು. ಈ ವೇಳೆ ಮಾತನಾಡಿದ ಅವರು, ಮೊಬೈಲ್ ಎಂಬ ಮಂತ್ರದಂಡ ಅಂಗೈಯಲ್ಲಿದ್ದರೂ, ಗೂಗಲ್ ಸರ್ಚ್ನಲ್ಲಿ ಭೂಗೋಳವೇ ಕಂಡರೂ ನಿಜವಾದ ಜ್ಞಾನಸಂಪಾದನೆಗೆ ಗ್ರಂಥಾಲಯಗಳನ್ನು ಅವಲಂಬಿಸಿಕೊಂಡವರ ಸಂಖ್ಯೆ ಕಡಿಮೆಯಿಲ್ಲ. ಆದರೂ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವಲ್ಲಿ ಗ್ರಂಥಾಲಯಗಳು ಹಿಂದೆಬಿದ್ದಿವೆ ಎಂದು ವಿಷಾದ ವ್ಯಕ್ತಪಡಿಸಿದ್ರು. ಕಾಲೇಜಿನ ಪ್ರಾಂಶುಪಾಲ ಡಾ. ಉದಯ ಕುಮಾರ್ ಎಂ.ಎ. ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಾಲಯಗಳ ಅಸೋಸಿಯೇಷನ್ ಉಪಾಧ್ಯಕ್ಷ ಡಾ. ವಾಸಪ್ಪ ಗೌಡ, ಕಾರ್ಯದರ್ಶಿ ಡಾ. ರಾಜಶೇಖರ ಕುಂಬಾರ, ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಪಾಲಕಿ ವನಜಾ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

Leave a Reply

Your email address will not be published. Required fields are marked *