Header Ads
Header Ads
Breaking News

ಮಂಗಳೂರು ವಿವಿ ವಲಯಮಟ್ಟದ ವಾಲಿಬಾಲ್ ಪಂದ್ಯಾಟ

ಮಂಗಳೂರು ವಿಶ್ವವಿದ್ಯಾಲಯದ ಮಂಗಳೂರು ವಲಯಮಟ್ಟದ ಅಂತರ್ ಕಾಲೇಜು ಪುರುಷರ ವಾಲಿಬಾಲ್ ಪಂದ್ಯಾವಳಿ ಹಾಗೂ ಶ್ರೀ ಪಟೇಲ್ ಸೌಕೂರು ಅನಂತಯ್ಯ ಶೆಟ್ಟಿ ಮೆಮೋರಿಯಲ್ ಟ್ರೋಫಿ ವಾಲಿಬಾಲ್ ಪಂದ್ಯಾಟ ಮೈದಾನದಲ್ಲಿ ನಡೆಯಿತು. ಅಂತರಾಷ್ಟ್ರೀಯ ವಾಲಿಬಾಲ್ ತರಬೇತುದಾರರಾದ ನಾರಾಯಣ ಆಳ್ವ ಪಂದ್ಯಾಟಕ್ಕೆ ಚಾಲನೆ ನೀಡಿದರು.

ಪಂದ್ಯಾಟಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು ಕ್ರೀಡೆಗೆ ಇಂದು ಬಹಳಷ್ಟು ಪ್ರೋತ್ಸಾಹ ದೊರೆಯುತ್ತಿದೆ. ಕ್ರೀಡಾಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಶಿಸ್ತು ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದರು.ಮಂಗಳೂರು ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಈಶ್ವರ ಪಿ. ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯವು ಕಳೆದ ಹಲವಾರು ವರ್ಷಗಳಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಪರಿಣಾಮ ಅಥ್ಲೆಟಿಕ್ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಹಲವು ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ ಎಂದರುಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ.ಕಿಶೋರ್ ಕುಮಾರ್ ಸಿ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಡಾ.ಜೆರಾಲ್ಡ್ ಸಂತೋಷ್ ಡಿಸೋಜ, ಡಾ.ಹರಿದಾಸ್ ಕೂಳೂರು, ಪ್ರಸನ್ನ, ರಮೇಶ್, ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಿಯಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply