Header Ads
Breaking News

ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ

ಅಕ್ಷರ ಸಂತ ಹರೇಕಳ ಹಾಜಬ್ಬ ಅವರು 2020ನೇ ಸಾಲಿನ ಪದ್ಮಶ್ರೀ ಗೌರವಕ್ಕೆ ಆಯ್ಕೆಯಾಗಿದ್ದಾರೆ.


ತಮ್ಮ ಸ್ವಂತ ದುಡಿಮೆಯಲ್ಲಿ ಬಡಮಕ್ಕಳಿಗಾಗಿ ಶಾಲೆ ನಿರ್ಮಿಸಿದ, ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ದಕ್ಷಿಣ ಕನ್ನಡದ ಕಿತ್ತಳೆ ವ್ಯಾಪಾರಿ ’ಅಕ್ಷರ ಸಂತ’ ಹರೇಕಳ ಹಾಜಬ್ಬ ಅವರು 2020ನೆ ಸಾಲಿನ ’ಪದ್ಮಶ್ರೀ’ ಗೌರವಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಇಬ್ಬರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯದ ಮಹಿಳೆಯಾದ ತುಳಸೀಗೌಡಗೆ ಅವರಿಗೆ ಪರಿಸರ ರಕ್ಷಣೆಗಾಗಿ ಪದ್ಮಶ್ರೀ ಗೌರವ ಸಿಕ್ಕಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಇಂದು ದೇಶದ ನಾಲ್ಕನೆ ಅತ್ಯುನ್ನತ ಪುರಸ್ಕಾರವಾದ ’ಪದ್ಮಶ್ರೀ’ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಘೋಷಿಸಿದೆ.

Related posts

Leave a Reply

Your email address will not be published. Required fields are marked *