Header Ads
Breaking News

ದ.ಕ. ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ : ಉಸ್ತುವಾರಿ ಸಚಿವರ ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಹಾಗೂ ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.

ದ.ಕ. ಜಿಲ್ಲೆಯಾದ್ಯಂತ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗಳಿಗೆ ನಿಷೇಧ ವಿಧಿಸಿ ಹಾಗೂ ಎಲ್ಲ ರೀತಿಯ ಧಾರ್ಮಿಕ ಆಚರಣೆಗಳನ್ನು ಸಾಂಕೇತಿಕವಾಗಿ ಆಚರಿಸುವಂತೆ ದ.ಕ. ಜಿಲ್ಲಾಡಳಿತ ಸೋಮವಾರ ರಾತ್ರಿ ಆದೇಶ ಹೊರಡಿಸಿತ್ತು. ಜತೆಗೆ 144(3) ಅನ್ವಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದರಂತೆ ಜಿಲ್ಲೆಯಲ್ಲಿ ಜಾತ್ರೆ, ಯಕ್ಷಗಾನ, ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ವಿಷಯದಲ್ಲಿ ಸಾರ್ವಜನಿಕರಲ್ಲಿ ನಾನಾ ರೀತಿಯಪ್ರಶ್ನೆ ಹಾಗೂ ಗೊಂದಲ ಮೂಡಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಮೇಲಿನ ಸ್ಪಷ್ಟನೆ ನೀಡಿದ್ದಾರೆ ಹಾಗೂ ಈ ಬಗ್ಗೆ ಜಿಲ್ಲಾಧಿಕಾರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಇಂದು ಆರೋಗ್ಯ ಸಚಿವರ ಸಭೆ ಕೋವಿಡ್ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಆರೋಗ್ಯ ಸಚಿವ ಡಿ. ಸುಧಾಕರ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶೇಷ ಸಭೆ ಆಯೋಜಿಸಿದ್ದಾರೆ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ.

Related posts

Leave a Reply

Your email address will not be published. Required fields are marked *