Breaking News

ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ ಗೆ ಜಾಮೀನು ಮಂಜೂರು

ಅತ್ಯಾಚಾರಿಗಳ ಕೈ ಕಡಿಯಿರಿ ಎಂದು 2014 ರಲ್ಲಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಇಂದು ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುತಾಲಿಕ್ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. 2014ರಲ್ಲಿ ಪ್ರಚೋದನಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಅದರೆ ಆದೇಶವನ್ನು ಪಾಲಿಸದೇ ಇದ್ದುದರಿಂದ ಮುತಾಲಿಕ್‌ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿತ್ತು. ಇಂದು ಕೋರ್ಟ್‌ಗೆ ಹಾಜರಾಗಿದ್ದ ಮುತಾಲಿಕ್‌ಗೆ ಜಾಮೀನು ಮಂಜೂರು ಮಾಡಲಾಯಿತು.

Related posts

Leave a Reply