Header Ads
Header Ads
Breaking News

ಸಂಸದ ನಳಿನ್ ಕುಮಾರ್ ಟ್ವೀಟ್‌ಗೆ ಐವನ್ ಡಿಸೋಜಾ ಕಿಡಿ: ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ನೀಡುವವರಿಗೆ ಮತ ಹಾಕಬೇಕೆ ಹೊರತು, ರಾತ್ರಿ 3 ಗಂಟೆಗೆ ಉಗ್ರರಿಗಾಗಿ ಸುಪ್ರೀಂ ಕೋರ್ಟ್‌ನ ಬಾಗಿಲು ತೆರೆಸುವವರಿಗಲ್ಲಾ… ಮೋದಿ -ಮತ್ತೊಮ್ಮೆ ’ಎಂದು ಟ್ವೀಟ್‌ಗೈದ ಸಂಸದ ನಳಿನ್ ಕುಮಾರ್ ಕಟೀಲು ವಿರುದ್ಧ ಚುನಾವಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆಗ್ರಹಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರವಿವಾರ ಸಂಜೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೆ ಸಂಸದ ನಳಿನ್ ಮಾರ್ಚ್ 11ರ 10:16ಕ್ಕೆ ಇಂತಹ ಟ್ವೀಟ್ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ, ದೇಶದ ರಕ್ಷಣೆಗಾಗಿ ಹೋರಾಡಿದ ವೀರ ಸೈನಿಕರ ಸಾಹಸವನ್ನು ಮತ ಪರಿವರ್ತನೆಗಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಡಿಸಿಸಿ ಉಪಾಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *