Header Ads
Header Ads
Breaking News

ಮಂಜೇಶ್ವರದಲ್ಲಿ ವಾಹನ ತಪಾಸಣೆ ಮಧ್ಯೆ ಬಸ್ಸೊಂದರಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 100 ಕಿಲೋ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಕರ್ನಾಟಕ ನಿವಾಸಿಗಳಾದ ಮೂವರನ್ನು ಪೊಲೀಸರು ವಶಕ್ಕೆ ತೆಗೆದು ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಳಿಸಿದ್ದಾರೆ.ಕರ್ನಾಟಕದಿಂದ ಕೇರಳಕ್ಕೆ ಆಗಮಿಸುತಿದ್ದ ದುರ್ಗಾಂಬ ಬಸ್ಸಿನಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಕ್ಕೆ ತೆಗೆಯಲಾಗಿದೆ.ಪೊಲೀಸರಿಗೆ ಲಭಿಸಿದ ರಹಸ್ಯ ಮಾಹಿತಿಯಂತೆ ಕಾರ್ಯಾಚರಣೆ ನಡೆದಿದೆ.ಅಬಕಾರಿ ಅಧಿಕಾರಿ ರವೀಂದ್ರನಾಥ್ ಹಾಗೂ ಇತರ ಸಿಬ್ಬಂಧಿಗಳ ಕಾರ್ಯಾಚರಣೆಯಲ್ಲಿ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಕ್ಕೆ ತೆಗೆಯಲಾಗಿದ್ದು, ಈ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಸುಮಾರು ಒಂದು ಲಕ್ಷ ರೂ. ಬೆಲೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Related posts

Leave a Reply