Breaking News

ಮಂಜೇಶ್ವರದ ಕುಂಜತ್ತೂರು ಶಾಲೆಯಲ್ಲಿ ಪರಿಸರ ದಿನಾಚರಣೆ ಸಂರಕ್ಷಣಾ ಯಜ್ಞ ವಿದ್ಯಾರ್ಥಿಗಳ ಸಂದೇಶ ಕುಂಜತ್ತೂರು ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಸ್ಥಾನ

ಕೇರಳ ರಾಜ್ಯದ ಮುಖ್ಯ ಮಂತ್ರಿಗಳ ಸಂರಕ್ಷಣಾ ಯಜ್ಞ ವಿದ್ಯಾರ್ಥಿಗಳ ಸಂದೇಶಕ್ಕೆ ಜಿಲ್ಲಾ ಮಟ್ಟದಲ್ಲಿ ಕುಂಜತ್ತೂರು ಹೈಯರ್ ಸೆಕಂಡರಿ ಶಾಲೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ.

ಪರಿಸರ ದಿನಾಚರಣೆಯಂಗವಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರವರು ಶಾಲಾ ಮಕ್ಕಳಿಗೆ ಕಳುಹಿಸಿದ ಸಂದೇಶಕ್ಕೆ ಪ್ರತಿಕ್ರಿಯೆ ನೀಡಿದ ಶಾಲೆಗಳ ಪೈಕಿ ಕಾಸರಗೋಡು ಜಿಲ್ಲೆಯಲ್ಲಿ ಕುಂಜತ್ತೂರು ಹೈಯರ್ ಸೆಕಂಡರಿ ಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ಆಯಿಷತ್ ತನ್ಸೀನಾ ಹಾಗೂ ೮ ನೇ ತರಗತಿಯ ಶಾಯಿಝಾ ಎಂಬೀ ವಿದ್ಯಾರ್ಥಿನಿಗಳು ಕಳುಹಿಸಿದ ಪ್ರತಿಕ್ರಿಯೆಗಳಿಗೆ ಜಿಲ್ಲ ಮಟ್ಟದ ಕನ್ನಡ ಮಾಧ್ಯಮ ಪ್ರೌಢ ಶಾಲಾ ವಿಭಾಗದ ವತಿಯಿಂದ ಪ್ರಥಮ ಹಾಗೂ ಧ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿನಿಗಳಿಗೆ ಜಿಲ್ಲಾ ಶಿಕ್ಷಣ ಉಪನಿರ್ಧೆಶಕರು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದ್ದಾರೆ.
ವರದಿ: ರೆಹಮಾನ್ ಮಂಜೇಶ್ವರ

Related posts

Leave a Reply