Header Ads
Breaking News

ಮಂಜೇಶ್ವರದ ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಯಲ್ಲಿ ಹಲವರಿಗೆ ಗಾಯ

ಮಂಜೇಶ್ವರ: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಹಾಗೂ ಶರತ್ ಲಾಲ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಡೈರಿಯನ್ನು ಸಿಬಿಐಗೆ ನೀಡದಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಘಟನೆಯಲ್ಲಿ ಡಿವೈಎಸ್ಪಿ ಸೇರಿದಂತೆ ಏಳು ಪೊಲೀಸರು ಹಾಗೂ ಹತ್ತಕ್ಕೂ ಅಧಿಕ ಯುವ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ವಿದ್ಯಾನಗರ ಪರಿಸರದಿಂದ ಮೆರವಣಿಗೆಯ ಮೂಲಕ ತೆರಳಿದ ನೇತಾರರು ಹಾಗೂ ಕಾರ್ಯಕರ್ತರು ಪೊಲೀಸರ ಬ್ಯಾರಿಕೇಡ್‍ಗಳನ್ನು ತೆಗೆದು ನುಗ್ಗಲೆತ್ನಿಸಿದಾಗ ಪೊಲೀಸರು ಐದಕ್ಕೂ ಮಿಕ್ಕ ಬಾರಿ ಜಲಫಿರಂಗಿ ಪ್ರಯೋಗಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಅಶ್ರುವಾಯು ಪ್ರಯೋಗಿಸಿದ್ದಾರೆ. ಆದರೂ ಕಾರ್ಯಕರ್ತರು ಪೊ ಲೀಸರಿಗೆ ಕಲ್ಲು ತೂರಾಟ ಮುಂದುವರಿಸಿದಾಗ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದೆ. ಲಾಠಿ ಚಾರ್ಜ್‍ನಿಂದ ಹಲವರು ಗಾಯಗೊಂಡಿದ್ದಾರೆ. ಕಲ್ಲೆಸತದಿಂದ ಡಿವೈಎಸ್ಪಿ ಬಾಲಕೃಷ್ಣ ನಾಯರ್ ಸೇರಿದಂತೆ ಏಳು ಪೊಲಿಸರು ಗಾಯಗೊಂಡಿದ್ದಾರೆ.

Related posts

Leave a Reply

Your email address will not be published. Required fields are marked *