Header Ads
Header Ads
Breaking News

ಮಂಜೇಶ್ವರ : ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

ಮಂಜೇಶ್ವರ ಅವರ್ ಲೇಡಿ ಆಫ್ ಮೆರ್ಸಿ ಚರ್ಚ್ ಮೇಲಿನ ದಾಳಿ ಹಾಗೂ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಪ್ರತಿಭಟಿಸಿ ಕಾಸರಗೋಡು ವಲಯ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಮೆರವಣಿಗೆ ಮಂಜೇಶ್ವರ ಬ್ಲಾಕ್ ಪಂಚಾಯತ್ ಕಚೇರಿ ಪರಿಸರದಿಂದ ಮಂಜೇಶ್ವರ ಚರ್ಚ್ ಮುಂಭಾಗದ ರಸ್ತೆಯಲ್ಲಿ ಸಾಗಿ ಹೊಸಂಗಡಿ ಜಂಕ್ಷನ್‌ನಲ್ಲಿ ಕೊನೆಗೊಂಡಿತು. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಶೀಘ್ರವೇ ಆರೋಪಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುನ್ನೆಚ್ಚರಿಕೆ ನೀಡಲಾಯಿತು. ಬಳಿಕ ಹೊಸಂಗಡಿ ಪೇಟೆಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಕೆಥೋಲಿಕ್ ಸಭಾ ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ರಾಜು ಸ್ಟೀಫನ್ ಕುಂಬಳೆ ಅಧ್ಯಕ್ಷತೆ ವಹಿಸಿದ್ದರು.
ಕಾಸರಗೋಡು ವಲಯ ಪ್ರಧಾನ ಧರ್ಮಗುರು ಹಾಗೂ ಬೇಳ ಶೋಕಮಾತಾ ಪುಣ್ಯಕ್ಷೇತ್ರದ ಧರ್ಮಗುರು ಫಾದರ್ ಜೋನ್ ವಾಸ್, ಕಾಸರಗೋಡು ಕೋಟೆಕಣಿ ಚರ್ಚ್‌ನ ಧರ್ಮಗುರು ಫಾದರ್ ಮಾಣಿ ಮೇಲ್ವಟ್ಟಂ, ಕೆಥೋಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಧ ರೋಲ್ಫಿ ಡಿ ಕೋಸ್ಟಾ, ಹಾಗೂ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *