Header Ads
Header Ads
Breaking News

ಮಂಜೇಶ್ವರ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾ ದಿನಾಚರಣೆ, ಕನ್ನಡ ಪತ್ರಿಕಾರಂಗದ ಪ್ರಾಮುಖ್ಯತೆ

 

ಗಡಿನಾಡ ಪ್ರದೇಶವಾದ ಮಂಜೇಶ್ವರ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರೆಸ್ ಕ್ಲಬ್ ಅಧ್ಯಕ್ಷ ಆರಿಫ್ ಮಚ್ಚಂಪ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಹಾಗೂ ಕಾಸರಗೋಡು ಜಿಲ್ಲಾ ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಮ್ಮ ಮೂಗಿನ ನೇರಕ್ಕೆ ಸುದ್ದಿ, ಲೇಖನಗಳು ಪ್ರಕಟಗೊಳ್ಳುತ್ತಿಲ್ಲ ಹಾಗೂ ಸಮಾಜದ ಏರು ಪೇರುಗಳನ್ನು, ಆಡಳಿತ ವರ್ಗದ ವೈಫಲ್ಯಗಳನ್ನು ಯಥಾವತ್ ಅನಾವರಣಗೊಳಿಸಲಾಗುತ್ತಿದೆ ಎಂಬ ಒಂದೇ ಒಂದು ಕಾರಣಕ್ಕೆ ಪತ್ರಿಕೆಗಳ ಹಾಗೂ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಪ್ರಯತ್ನವನ್ನು ಅಧಿಕಾರದ ಗದ್ದುಗೆಯಲ್ಲಿರುವ ಮಂದಿಗಳು ಮಾಡುತ್ತಿರುವ ಒಂದೆರಡು ಪ್ರಕರಣಗಳು ಕಂಡು ಬರುತ್ತಿದೆಯಾದರೂ ಅವೆಲ್ಲವನ್ನೂ ಯಶಸ್ವಿಯಾಗಿ ಮೆಟ್ಟಿ ನಿಂತು ಕನ್ನಡ ಪತ್ರಿಕಾ ರಂಗ ಇಂದಿಗೂ ತನ್ನ ಗಂಭೀರತೆಯನ್ನು, ಪ್ರಾಮುಖ್ಯತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಎಲ್ಲ ಏಳು ಬೀಳುಗಳ ಮಧ್ಯೆ ಕನ್ನಡ ಪತ್ರಿಕಾರಂಗ ಇದೀಗ ಒಂದೂ ಮುಕ್ಕಾಲು ಶತಮಾನ ದಾಟಿ ಮುನ್ನಡೆಯುತ್ತಿರುವುದು ಸಾಧನೆಯೇ ಸರಿ ಎಂದು ಹೇಳಿದರು.
ಈ ಸಂದರ್ಭ ಪ್ರೆಸ್ ಕ್ಲಬ್ ಕಾರ್ಯದರ್ಶಿ ರಹ್ಮಾನ್ ಉದ್ಯಾವರ, ಪತ್ರಕರ್ತರಾದ ರತನ್ ಕುಮಾರ್ ಹೊಸಂಗಡಿ, ಸನಲ್ ಕುಮಾರ್, ಸಲಾಂ ವರ್ಕಾಡಿ, ಛಾಯಾಗ್ರಾಹಕ ದೀಪಕ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply