Header Ads
Breaking News

ಮಂಡ್ಯದಲ್ಲಿ ಐಟಿ ದಾಳಿ ವಿಚಾರ: ಕುಂದಾಪುರದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಮ್ಮ ಕುಟುಂಬ ಸದಸ್ಯರು ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ತರಬೇಕು ಎನ್ನುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿಯನ್ನು ಸಂಘಟಿಸುತ್ತಿದೆ. ಇಂತಹ ವ್ಯವಸ್ಥಿತ ದಾಳಿಯಿಂದ ಯಾವುದೆ ರೀತಿಯಿಂದಲೂ ನಾವು ಆತಂಕಕ್ಕೆ ಒಳಗಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇಲ್ಲಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೌಕೂರು ಬೀದಿ ಮನೆಯ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ (ಹೆಬ್ಬಾರ್) ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನದಲ್ಲಿ ಇರುವ ಇಲಾಖೆಗಳನ್ನು ಬಳಸಿಕೊಂಡು ಅಧಿಕಾರ ದುರುಪಯೋಗ ಮಾಡಿಕೊಂಡು ನಮ್ಮನ್ನು ದೃತಿಗೆಡಿಸುವ ಯಾವ ಪ್ರಯತ್ನಗಳು ಯಶಸ್ಸು ಕಾಣೋದಿಲ್ಲ ಎಂದು ಸಿಎಂ ಕುಮಾರಸ್ವಾಮಿ ಐಟಿ ದಾಳಿಯ ಕುರಿತು ಪ್ರತಿಕ್ರಿಯೆ ನೀಡಿದರು.

ಕಳೆದ ಒಂದು ತಿಂಗಳಿಂದ ಚುನಾವಣಾ ಕಾರ್ಯಗಳಿಗಾಗಿ ಹೆಲಿಕ್ಯಾಪ್ಟರ್‌ಬಳಕೆಗೆ ಅನುಮತಿಯನ್ನು ಕೇಳುತ್ತಿದ್ದರೂ ವಿಪಕ್ಷದ ನಾಯಕರುಗಳಿಗೆ ಹೆಲಿಕ್ಯಾಪ್ಟರ್ ದೊರಕುತ್ತಿಲ್ಲ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಆಂಧ್ರ ಪ್ರದೇಶದಲ್ಲಿಯೂ ಇದೇ ಪರಿಸ್ಥಿತಿ ಇದೆ. ಕೇಂದ್ರದ ಇಲಾಖೆಗಳನ್ನು ಬಳಸಿಕೊಂಡು ಪ್ರಜಾಪ್ರಭುತ್ವ ವಿರೋಧಿ ನೀತಿಯಿಂದ ವಿಪಕ್ಷವನ್ನು ಮಣಿಸಬಹುದು ಎನ್ನುವ ಬಿಜೆಪಿ ಪಕ್ಷಕ್ಕೆ ಕಾಲವೇ ಉತ್ತರ ನೀಡಲಿದೆ.

ಈ ವೇಳೆಯಲ್ಲಿ ಮಾತನಾಡಿದ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ ಅವರು ಬೆಂಗಳೂರಿನ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕನಾಥ ಹಾಗೂ ನಾವು ಹಲವು ವರ್ಷಗಳಿಂದ ಪರಿಚಿತರಾಗಿದ್ದು, ಧರ್ಮ ಸೂಕ್ಷ್ಮ ವಿಚಾರಗಳನ್ನು ನಾವು ಪರಸ್ಪರ ಚರ್ಚಿಸುತ್ತೇವೆ. ಅವರ ಸಲಹೆಯಂತೆ ಮುಖ್ಯಮಂತ್ರಿಗಳು ನಮ್ಮಲ್ಲಿ ಆಗಮಿಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇ ಗೌಡ, ಜೆಡಿಎಸ್‌ಜಿಲ್ಲಾಧ್ಯಕ್ಷ ಯೋಗೀಶ್‌ಶೆಟ್ಟಿ, ಕಿಶೋರ ಬಲ್ಲಾಳ್ ಕುಂದಾಪುರ, ಸಬ್ಲಾಡಿ ಮಂಜಯ್ಯ ಶೆಟ್ಟಿ ಹಾಜರಿದ್ದರು.

Related posts

Leave a Reply

Your email address will not be published. Required fields are marked *