Header Ads
Header Ads
Breaking News

ಮಂಡ್ಯದಲ್ಲಿ ಲೋಕಸಭಾ ಅಭ್ಯರ್ಥಿ ಸ್ಪರ್ಧೆ ವಿಚಾರ,ಇನ್ನು ಕೂಡಾ ಯಾವ ಅಭ್ಯರ್ಥಿ ಎಂಬುದು ಅಂತಿಮವಾಗಿಲ್ಲ:ಸಿದ್ಧರಾಮಯ್ಯ ಹೇಳಿಕೆ

ಮಂಡ್ಯದಲ್ಲಿ ಲೋಕಸಭಾ ಅಭ್ಯರ್ಥಿ ಸ್ಪರ್ಧೆ ಇನ್ನು ಅಂತಿಮವಾಗಿಲ್ಲ, ಕಾಂಗ್ರೆಸ್ – ಜೆಡಿಎಸ್ ಮುಖಂಡರ ಜೊತೆ ಚರ್ಚೆ ಮಾಡಿದ ಬಳಿಕವೇ ಅಂತಿಮ ಅಭ್ಯರ್ಥಿಯನ್ನ ಘೋಷಣೆ ಮಾಡಲಾಗುವುದು ಅಂತಾ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಸುಮಲತಾ ಅಂಬರೀಷ್ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಅದ್ರೆ ಇನ್ನೂ ಕೂಡ ಅಭ್ಯರ್ಥಿ ಅಂತಿಮವಾಗಿಲ್ಲ, ಈ ಬಗ್ಗೆ ಚರ್ಚೆ ನಡೆದಿಲ್ಲ. ಕಾಂಗ್ರೆಸ್ – ಜೆಡಿಎಸ್ ಮುಖಂಡರು ಜೊತೆ ಚರ್ಚೆ ನಡೆಸುತ್ತೇವೆ. ಯಾರಿಗೆ ಗೆಲ್ಲುವ ಸಾಮರ್ಥ್ಯವಿದೆ ಅವರನ್ನ ನಿಲ್ಲಿಸುತ್ತೇವೆ ಎಂದು ಸಿದ್ಧರಾಮಯ್ಯ ಹೇಳಿದ್ರು.
ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ, ಐಡಿ, ಇಡಿ ಬಳಸಿ ಕಾಂಗ್ರೆಸ್ ನಾಯಕರ ಮೇಲೆ ರಾಜಕೀಯ ದ್ವೇಷ ಮಾಡಿದ್ದಾರೆ ಅಂತಾ ಹೇಳಿದರು.
ಇನ್ನು ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು 5ವರ್ಷ ಅಧಿಕಾರ ಮಾಡಿಲ್ಲ, ಅವರಲ್ಲಿ ಮೂರು ಮಂದಿ ಮುಖ್ಯಮಂತ್ರಿಯಾಗಿದ್ದಾರೆ. ಹಲವರ ಮೇಲೆ ಕ್ರಿಮಿನಲ್ ಕೇಸ್ ಆಗಿತ್ತು ಎಂಟು ಮಂದಿ ಜೈಲಿಗೆ ಹೋಗಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ರು.

Related posts

Leave a Reply