Header Ads
Header Ads
Breaking News

ಮಕ್ಕಳ ಭವಿಷ್ಯ ಕಾಪಾಡಲು ಪೋಲಿಯೋ ಹಾಕಿಸಿ:  ಡಾ. ಜಯಮಾಲಾ 

ಮಕ್ಕಳ ಭವಿಷ್ಯ ಆರೋಗ್ಯಕರವಾಗಿರುವ ದೃಷ್ಠಿಯಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.


ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಡಿಹೆಚ್‌ಓ ಡಾ. ಓಂ ಪ್ರಕಾಶ್ ಕಟ್ಟೀಮನಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಪಲ್ಸ್ ಪೋಲಿಯೋ ನೋಡೆಲ್ ಅಧಿಕಾರಿ ಡಾ. ಶೀನಪ್ಪ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ವಿವಿಧ ಕಡೆಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು.

ವರದಿ: ಪಲ್ಲವಿ ಸಂತೋಷ್ ಉಡುಪಿ

Related posts

Leave a Reply

Your email address will not be published. Required fields are marked *