Header Ads
Header Ads
Breaking News

ಮಠಗಳನ್ನು ಸ್ವಾಧೀನಪಡಿಸಿಕೊಳ್ಳುವ ವಿಚಾರ ಸರ್ಕಾರ ಹಿಂದೂ ವಿರೋಧಿ ಎಂಬುವುದು ಸ್ಪಷ್ಟವಾಗಿದೆ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪ್ರತಿಕ್ರಿಯೆ

ಮಠಗಳನ್ನು ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯಡಿ ಸೇರಿಸಿ ಸ್ವಾಧೀನಪಡಿಸಿಕೊಳ್ಳುವ ವಿಚಾರದ ಕುರಿತು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ನಾನು ಹೋರಾಟ ಮಾಡಲ್ಲ ಜನತೆಗೆ ಬಿಟ್ಟಿದ್ದೇನೆ. ಸರ್ಕಾರ ಹಿಂದೂ ವಿರೋಧಿ ಎಂಬುದು ಸ್ಪಷ್ಟವಾಗಿದೆ. ಜಾತ್ಯಾತೀತ ಸರ್ಕಾರ ಎಲ್ಲರನ್ನು ಸಮಾನವಾಗಿ ನೋಡಬೇಕು. ಸಮಾನತೆಗೆ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಅಲ್ಪಸಂಖ್ಯಾತರು ಮುಗ್ದರೆಂದು ಬಿಡುಗಡೆ ಮಾಡುವ ನಿರ್ಧಾರವೂ ತೆಗೆದುಕೊಂಡಿತ್ತು. ನಮ್ಮ ಮಠ ಸರ್ಕಾರ ಸ್ವಾಧೀನಪಡಿಸಿಕೊಂಡರೆ ಮಠದಿಂದಲೇ ಹೊರಗೆ ಬರುತ್ತೇನೆ. ಸರ್ಕಾರದ ನೌಕರರಾಗಿ ಇರಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

 

Related posts

Leave a Reply