Header Ads
Header Ads
Breaking News

ಮಣಿಪಾಲದ ರಜತಾದ್ರಿಯಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಮಣಿಪಾಲದ ರಜತಾದ್ರಿಯಲ್ಲಿರುವ ಡಿಸಿ ಕಚೇರಿಯ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು. ಮಹಿಳಾ ದಿನಚರಣೆಯ ಪ್ರಯುಕ್ತ ಮಹಿಳಾ ಮಂಡಲಗಳಿಂದ ವಸ್ತು ಪ್ರದರ್ಶನ ಮತ್ತು ಗೃಹಪಯೋಗಿ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಂಡರು.

ಜಿ.ಪಂ ಅಧ್ಯಕ್ಷ ದಿನಕರ್ ಬಾಬು, ಸಂಸದೆ ಶೋಭಾ ಕರಂದ್ಲಾಜೆ, ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರಲ್ ಪಾಟಿ ಸೇರಿದಂತೆ ನೆರೆದ ಗಣ್ಯರು ಮಹಿಳಾ ದಿನವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಎಲ್ಲಾ ರಂಗದಲ್ಲಿ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರು ಮುಂದಿದಿದ್ದಾರೆ. ಈ ಮೂಲಕ ದೇಶಕ್ಕೇ ಉಡುಪಿ ಮಾದರಿಯಾಗಿದೆ. ಮಹಿಳೆಯ ಕೈಗೆ ಅಧಿಕಾರ ನೀಡಿದರೆ ಅದನ್ನ ನಿಭಾಯಿಸುವ ಶಕ್ತಿ ಇದೆ. ಮಹಿಳೆಯರಿಗೆ ಎಲ್ಲಾ ರಂಗದಲ್ಲಿ ಸಾಕಷ್ಟು ಶಕ್ತಿ ತುಂಬುವ ಕೆಲಸ ಆಗಬೇಕಿದೆ ಎಂದರು.
ಸಮಾರಂಭದಲ್ಲಿ ಎಡಿಸಿ ವಿದ್ಯಾಕುಮಾರಿ, ತಾ.ಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ ಸಿಇಒ ಸಿಂದು ರೂಪೇಶ್, ಸರಳಾ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಸ್ವಸಹಾಯ ಸಂಘದ ಸದಸ್ಯರು ಮಹಿಳಾಮಂಡಳಿಗಳ ಸದಸ್ಯರು ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು. ಮಹಿಳಾ ದಿನದ ಅಂಗವಾಗಿ ಕರಕುಶಲ ವಸ್ತು ಪ್ರದರ್ಶನ, ಗೃಹಪಯೋಗಿ ವಸ್ತುಗಳ ಮಾರಾಟ ಮತ್ತು ಪ್ರದರ್ಶನ ನಡೆಯಿತು.

Related posts

Leave a Reply

Your email address will not be published. Required fields are marked *