Header Ads
Header Ads
Header Ads
Breaking News

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಅಮೃತ ಮಹೋತ್ಸವ ಜ.4 ರಂದು ನಾಗಾಲ್ಯಾಂಡ್ ರಾಜ್ಯಪಾಲರಿಂದ ಉದ್ಘಾಟನೆ

ಮಣಿಪಾಲ ಅಕಾಡಮಿ ಆಫ್ ಜನರಲ್ ಎಜುಕೇಶನ್ ಅಮೃತ ಮಹೋತ್ಸವದ ಅಂಗವಾಗಿ 2018 ರ ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಉದ್ಘಾಟನೆ ಜನವರಿ ೪ರಂದು ಮಣಿಪಾಲದ ವ್ಯಾಲಿವ್ಯೂ ನಲ್ಲಿ ನಡೆಯಲಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾಹೆಯ ಸಹ ಕುಲಾಧಿಪತಿ ಡಾ. ಎಚ್.ಎಸ್ ಬಳ್ಳಾಲ್ ಮಾಹಿತಿ ನೀಡಿದರು. ನಾಗಾಲ್ಯಾಂಡ್ ರಾಜ್ಯಪಾಲ್ ಬಿ.ವಿ ಆಚಾರ್ಯ ಈ ಅಮೃತಮಹೋತ್ಸವದ ಉದ್ಘಾಟನೆ ಮಾಡಲಿದ್ದಾರೆ. ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಗೆ ಸಂಬಂಧಿಸಿದ ಹಲವು ಮಂದಿ ಸಾಧಕರಿಗೆ ಸನ್ಮಾನಿಸಲಾಗುವುದು ಎಂದರು. ಜತೆಗೆ ಅಕಾಡಮಿಯ ಸಾಧನೆಗಳನ್ನು ಬಿಂಬಿಸುವ ಚಲನಚಿತ್ರ ಪ್ರದರ್ಶನ ನಡೆಯಲಿದೆ. ವಜ್ರಮಹೋತ್ಸವದ ಸಮಾರೋಪ ಸಮಾರಂಭ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗಡೆ ಉಪಸ್ಥಿತರಿರುವ ಎಂದರು.

ವರದಿ:ಪಲ್ಲವಿ ಸಂತೋಷ್

Related posts

Leave a Reply