Header Ads
Breaking News

ಮತಯಂತ್ರ ನಿಷೇಧಕ್ಕೆ ಆಗ್ರಹ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸುಪ್ರಿಮ್ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಅಂಚೆ ಪತ್ರ ಚಳುವಳಿ ನಡೆಯಲಿದೆ. ವಿಟ್ಲ ವಲಯದಲ್ಲಿ ಜೂ.೧೧ರಂದು ಬೆಳಗ್ಗೆ ೧೧.೩೦ಕ್ಕೆ ವಿಟ್ಲ ಅಂಚೇಕಛೇರಿ ಮುಂಭಾಗದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು ಹೇಳಿದರು.ಅವರು ವಿಟ್ಲ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಪಂಚದ ಎಲ್ಲಾ ಮುಂದುವರಿದ ದೇಶಗಳಲ್ಲಿಯೂ ಮತಯಂತ್ರಗಳನ್ನು ಚುನಾವಣೆಗೆ ಬಳಕೆ ಮಾಡದೆ ಮತ್ರ ಬಳಕೆ ಮಾಡಲಾಗುತ್ತಿದೆ. ಹಲವು ಮಾಧ್ಯಮಗಳು ಈಗಾಗಲೇ ಮತಯಂತ್ರಗಳನ್ನು ಯಾವ ರೀತಿಯಲ್ಲಿ ದುರ್ಬಳಕೆ ಮಾಡಬಹುದೆಂಬುದನ್ನು ತೋರಿಸಿವೆ. ಪ್ರಜಾಪ್ರಭುತ್ವದ ವ್ಯಾಪ್ತಿಯಡಿಯಲ್ಲಿ ಭಾರತದ ಪ್ರತಿಯೊಬ್ಬನಿಗೂ ಬೇಡಿಕೆಯನ್ನು ಹಾಗೂ ಭಾವನೆಯನ್ನು ವ್ಯಕ್ತ ಪಡಿಸುವ ಹಕ್ಕಿದೆ. ಈ ಹಿನ್ನಲೆಯಲ್ಲಿ ಮತಯಂತ್ರದ ಬಗ್ಗೆ ಸಂಶಯವನ್ನು ವ್ಯಕ್ತ ಪಡಿಸಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪುತ್ತೂರು ತಾಲೂಕಿನ ಕೋಡಿಂಬಾಡಿ ಸೇರಿ ಐದು ಗ್ರಾಮ ಪಂಚಾಯಿತಿಗಳಲ್ಲಿ ಕಾಂಪೋಸ್ಟ್ ಹಗರಣ ನಡೆದಿದ್ದು, ಇದರದಲ್ಲಿ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಛಾಯಿತಿ ಅಭಿವೃದ್ಧಿ ಅಧಿಕಾರಿಗಳು ಶಾಮೀಲಾಗಿರುವ ಆರೋಪಗಳಿದೆ. ಸದ್ಯ ಇವರು ತಲೆಮರೆಸಿಕೊಂಡು ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕುಂಟಿತವಾಗಿದೆ ಎಂದರು.ಡಿಸಿಸಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಾಳೆಕಲ್ಲು, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ಕಾರ್ಯದರ್ಶಿ ಎಸ್. ಕೆ. ಮಹಮ್ಮದ್ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್ ಉಪಸ್ಥಿತರಿದ್ದರು.

Related posts

Leave a Reply