Header Ads
Breaking News

ಮತ್ತೆ ಚುರುಕು ಪಡೆದ ಮಳೆ; ಕರಾವಳಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾದ್ಯಂತ ಗುರುವಾರ ಉತ್ತಮ ಮಳೆ ಸುರಿದಿದ್ದು, ಇಂದು ಕೂಡಾ ಭಾರಿ ಮ¼ ಸುರಿಯುತ್ತಿರುವುದರಿಂದ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಗುರುವಾರ ಮುಂಜಾನೆಯಿಂದಲೇ ಮಳೆ ಸುರಿದಿದ್ದು, ಸಾಯಂಕಾಲ ಅಬ್ಬರ ಹೆಚ್ಚಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದ್ದ ಹವಾಮಾನ ಇಲಾಖೆ, ಸಾಯಂಕಾಲ ರೆಡ್ ಅಲರ್ಟ್‍ಗೆ ಬದಲಿಸಿದೆ. ಪ್ರಸ್ತುತ ಹವಾವಾನದ ಸ್ಥಿತಿಗತಿ ಪ್ರಕಾರ ಶನಿವಾರ ಮುಂಜಾನೆವರೆಗೆ ರೆಡ್ ಅಲರ್ಟ್ ಇರಲಿದ್ದು, ಬಳಿಕ ಆರೆಂಜ್ ಅಲರ್ಟ್ ಮುಂದುವರಿಯಲಿದೆ.

ಮಂಗಳೂರು, ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದೆ. ಗ್ರಾಮಾಂತರ ಭಾಗದಲ್ಲಿ ತೋಡು, ತೊರೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಕೆಲವೆಡೆ ಪ್ರವಾಹ ಭೀತಿಯೂ ಉಂಟಾಗಿದೆ. ಸಮುದ್ರದಲ್ಲಿ ಬಲವಾದ ಗಾಳಿ ಬೀಸುತ್ತಿರುವುದರಿಂದ, ಮೀನುಗಾರಿಕೆಗೆ ತೆರಳಬಾರದು. ಸಾರ್ವಜನಿಕರು ನದಿ, ಸಮುದ್ರಕ್ಕೆ ಇಳಿಯಬಾರದು. ಭಾರಿ ಮಳೆ ಸುರಿಯುತ್ತಿರುವುದರಿಂದ ಜನ ಎಚ್ಚರಿಕೆಯಿಂದ ಇರುವಂತೆ ದ.ಕ, ಉಡುಪಿ ಜಿಲ್ಲಾಡಳಿತಗಳು ಸೂಚಿಸಿವೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ಎಲ್ಲ ಪಿಡಿಒ ಮತ್ತು ಗ್ರಾಮಕರಣಿಕರು ತಮ್ಮ ವ್ಯಾಪ್ತಿಯಲ್ಲಿ ಸನ್ನದ್ಧರಿದ್ದು, ವಿಪತ್ತಿನ ಸಂದರ್ಭ ತಕ್ಷಣ ಸ್ಪಂದಿಸಬೇಕು. ಅಪಾಯದ ಸಂದರ್ಭ ಜನ ಜಿಲ್ಲಾ ಕಂಟ್ರೋಲ್ ರೂಂ 1077 ಅಥವಾ ವಾಟ್ಸ್ಯಾಪ್ ಸಂಖ್ಯೆ 9483908000 ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *