Header Ads
Header Ads
Breaking News

ಮತ್ಸ್ಯಕ್ಷಾಮದಿಂದಾಗಿ ಮೀನುಗಾರರ ಬದುಕು ಚಿಂತಾಜನಕವಾಗಿದೆ ಸರಕಾರ ತಕ್ಷಣ ಸಮೀಕ್ಷೆ ನಡೆಸಬೇಕು : ವಿಶ್ವಾಸ್ ವಿ. ಅಮೀನ್ ಆಗ್ರಹ

ಹವಾಮಾನ ವೈಪರೀತ್ಯದಿಂದಾಗಿ ಸುಮಾರು 7ತಿಂಗಳಿಂದ ಉಡುಪಿ ಜಿಲ್ಲೆಯ ಮೀನುಗಾರರು ಮೀನುಗಾರಿಕೆಯಿಲ್ಲದೆ ಕಂಗಾಲಾಗಿದ್ದು ಈ ವರ್ಷ ಎದುರಾದ ಮತ್ಸ್ಯಕ್ಷಾಮದಿಂದಾಗಿ ಮೀನುಗಾರರ ಬದುಕು ಚಿಂತಾಜನಕವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಸಮೀಕ್ಷೆ ನಡೆಸಿ ಎಲ್ಲಾ ಮೀನುಗಾರರಿಗೆ ತುರ್ತು ಪರಿಹಾರ ನೀಡಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ. ಅಮೀನ್ ಆಗ್ರಹಿಸಿದ್ದಾರೆ.ಅವರು ಕಾಪು ಪ್ರೆಸ್ ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2019ನೇ ವರ್ಷದಲ್ಲಿ ಮೀನುಗಾರಿಕೆ ಸಂಪೂರ್ಣ ಸ್ತಬ್ಧಗೊಂಡಿದ್ದು, ಹವಾಮಾನ ವೈಪರೀತ್ಯದಿಂದಾಗಿ ಕಳೆದ 7 ತಿಂಗಳಿಂದ ಯಾವುದೇ ಮೀನುಗಾರಿಕೆ ನಡೆಯದೆ ಇರುವ ಕಾರಣ ಮೀನುಗಾರಿಕೆಯನ್ನೇ ನಂಬಿಕೊಂಡು ಬದುಕುತ್ತಿರುವ ಸಾವಿರಾರು ಕುಟುಂಬಗಳು ಕಂಗಾಲಾಗಿವೆ. ಹೀಗಾಗಿ ಸರಕಾರ ತಕ್ಷಣ ಸಮೀಕ್ಷೆ ನಡೆಸಿ ಎಲ್ಲಾ ಮೀನುಗಾರರಿಗೆ ತುರ್ತು ಪರಿಹಾರ ನೀಡಬೇಕು ಎಂದು ಹೇಳಿದರು.

Related posts

Leave a Reply

Your email address will not be published. Required fields are marked *