

ಮದ್ಯದ ಅಮಲಿನಲ್ಲಿ ಪತಿಯೇ ಪತ್ನಿಯನ್ನು ಕಟ್ಟಿಗೆ ತುಂಡಿನಲ್ಲಿ ಹೊಡೆದ ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಸೌಮ್ಯ ಫ್ರಾನ್ಸಿಸ್ ಕೊಲೆಯಾಗಿದ್ದು ಈಕೆಯ ಪತಿ ಜಾನ್ಸನ್ ಕೊಲೆಗೈದ ಆರೋಪಿಯಾಗಿದ್ದಾನೆ. ಇವರು ಗಂಡಿಬಾಗಿಲು ಸಮೀಪ ಜಮೀನು ಹೊಂದಿದ್ದು ಇಬ್ಬರು ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಪ್ರತಿ ದಿನ ಗಂಡ-ಹೆಂಡತಿ ಮಧ್ಯೆ ಗಲಾಟೆ ನಡೆಯುತ್ತಿತ್ತು ನಿನ್ನೆ ರಾತ್ರಿ ವಿಕೋಪಕ್ಕೆ ತಿರುಗಿ ಪತಿ ಜಾನ್ಸನ್ ಕಟ್ಟಿಗೆಯ ತುಂಡಿನಲ್ಲಿ ತಮ್ಮ ಪತ್ನಿಗೆ ಹಲ್ಲೆ ನಡೆಸಿದ್ದಾನೆ. ತಕ್ಷಣ ಅವರನ್ನು ಸ್ಥಳೀಯರ ಸಹಕಾರದಿಂದ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವಾಗ ದಾರಿಮಧ್ಯೆ ಸೌಮ್ಯ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಸೌಮ್ಯ ಅವರ ಸಹೋದರ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ವೃತ್ತ ನಿರೀಕ್ಷಕ ಸಂದೇಶ್ ಪಿ ಜಿ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಉಪ ನಿರೀಕ್ಷಕರಾದ ಪವನ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.