Header Ads
Header Ads
Breaking News

ಮನಪಾದ ಜಯನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಶಾಸಕ ವೇದವ್ಯಾಸ ಕಾಮತ್‍ರಿಂದ ಗುದ್ದಲಿಪೂಜೆ

ಮಂಗಳೂರು ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 29 ಲಕ್ಷ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಬೇಡಿಕೆಯಂತೆ ಈ ರಸ್ತೆಯನ್ನು 29 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗರೋಡಿ ಬ್ರಹ್ಮ ಬೈದರ್ಕಳ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್,ಬಿಜೆಪಿ ಮುಖಂಡರಾದ ರಮೇಶ್ ಕಂಡೆಟ್ಟು, ಭಾಸ್ಕರ ಚಂದ್ರಶೆಟ್ಟಿ, ವಸಂತ್ ಪೂಜಾರಿ,ಮಾಜಿ ಕಾಪೆರ್ರೇಟರ್ ಕೇಶವ ಮರೋಳಿ, ಬಿಜೆಪಿ ಮರೋಳಿ ವಾರ್ಡ್ ಅಧ್ಯಕ್ಷರಾದ ಜಗನ್ನಾಥ್ ದೊಡ್ಡಮನೆ ಮುಂತಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *