Header Ads
Breaking News

ಮನಪಾ ಮೇಯರ್ ಉಪಮೇಯರ್ ಆಯ್ಕೆ ವಿಚಾರ : 21ನೇ ಅವಧಿಯ ಮೀಸಲಾತಿಯಡಿ ಚುನಾವಣೆ ನಡೆಸುವಂತೆ ಸೂಚನೆ

ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್‍ಗೆ 21ನೆ ಅವಧಿಯ ಮೀಸಲಾತಿಯಡಿ ಚುನಾವಣೆ ನಡೆಸುವಂತೆ ರಾಜ್ಯ ಸರಕಾರ ಪಾಲಿಕೆಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯ ದಿವಾಕರ ಪಾಂಡೇಶ್ವರ ಹೆಸರು ಮುಂಚೂಣಿಯಲ್ಲಿದೆ.

ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿಯಡಿ ಚುನಾವಣೆ ನಡೆಯಲಿದೆ. ಹಾಗಾಗಿ ಮೇಯರ್ ಸ್ಥಾನಕ್ಕೆ 46ನೇ ಕಂಟೋನ್ಮೆಂಟ್ ವಾರ್ಡ್‍ನ ಬಿಜೆಪಿಯ ದಿವಾಕರ ಪಾಂಡೇಶ್ವರ ಆಯ್ಕೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಕಾರ್ಪೋರೇಟರ್  ಶರತ್, ಜಯಾನಂದ ಅಂಚನ್ ಅವರ ಹೆಸರೂ ಕೇಳಿಬರುತ್ತಿದೆ. ಪಾಲಿಕೆ ಸದಸ್ಯರ ಆಯ್ಕೆ ನಡೆದು ಸುಮಾರು ಮೂರು ತಿಂಗಳಾಗುತ್ತಾ ಬಂದಿದ್ದರೂ ಮೀಸಲಾತಿಯ ಗೊಂದಲದಿಂದಾಗಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ವಿಳಂಬವಾಗಿತ್ತು. ಇದೀಗ ಪಾಲಿಕೆಗೆ ಕಾಂಗ್ರೆಸ್- ಜೆಡಿಎಸ್ ಸರಕಾರದ ಅವಧಿಯಲ್ಲಿ ಪ್ರಕಟವಾಗಿದ್ದ 21ನೇ ಅವಧಿಯ ಮೀಸಲಾತಿಯನ್ನು ಅಂತಿಮಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. ಇದರಂತೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಮಂಗಳೂರು ಪಾಲಿಕೆ ಆಯುಕ್ತರು ಮಂಗಳವಾರ ಪತ್ರ ಬರೆದಿದ್ದಾರೆ. ಹಾಗಾಗಿ ಮುಂದಿನ 15 ದಿನಗಳಲ್ಲಿ ನೂತನ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ನಡೆಯುವ ಎಲ್ಲಾ ಸಾಧ್ಯತೆಗಳಿವೆ.

Related posts

Leave a Reply

Your email address will not be published. Required fields are marked *