Header Ads
Header Ads
Breaking News

ಮನಪಾ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ. ಆಗಸ್ಟ್ 29ರಂದು ಮಂಗಳೂರು ಪುರಭವನದಲ್ಲಿ ಉದ್ಘಾಟನೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 13ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು 28ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವು ಆಗಸ್ಟ್ 29ರಂದು ಮಂಗಳೂರಿನ ಪುರಭವನದಲ್ಲಿ ಜರುಗಲಿದೆ. ಇದೇ ವೇಳೆ ಪುರಭವನಕ್ಕೆ ಕುದ್ಮಲ್ ರಂಗರಾವ್ ಹೆಸರು ನಾಮಕರಣ ಮಾಡಲಾಗುವುದು ಎಂದು ಮನಪಾ ಮೇಯರ್ ಭಾಸ್ಕರ್ ಮೊಯ್ಲಿ ಹೇಳಿದರು.ಅವರು ಪಾಲಿಕೆಯ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ, ಖಾದರ್ ಕಾರ್ಯಕ್ರಮದ ಉದ್ಘಾಟನೆ ಮತ್ತು ಶೀಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖಯ ಅತಿಥಿಗಳಾಗಿ ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ, ಐವನ್ ಡಿಸೋಜ, ಪ್ರತಾಪಚಂದ್ರ ಶೆಟ್ಟಿ, ಬಿ.ಎಂ. ಫಾರೂಕ್ ಕೆ. ಹರೀಶ್ ಕುಮಾರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಇನ್ನು ಕೊಡಗು ಸಂತ್ರಸ್ತರಿಗೆ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ 10ಲಕ್ಷ ರೂಪಾಯಿ ದೇಣಿಗೆ ನೀಡಲಾಗಿತ್ತದೆ. ಇದರಲ್ಲಿ ಕಾರ್ಪೊರೇಟರ್‌ಗಳ1 ತಿಂಗಳ ಗೌರವಧನವಲ್ಲದೆ, ಅಧಿಕಾರಿ ಸಿಬ್ಬಂದಿ ವರ್ಗದ 1ದಿನದ ವೇತನ ಮೊತ್ತ ಕೂಡ ಸೇರಿದೆ ಎಂದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಉಪಮೇಯರ್ ಕುಂಜತ್‌ಬೈಲ್, ಮನಪಾ ಸಚೇತಕ ಶಶಿಧರ್ ಹೆಗ್ಡೆ, ವಿವಿಧ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನವೀನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply