Header Ads
Header Ads
Breaking News

ಮನೆ ನಿರ್ಮಾಣಕ್ಕೆ ಇನ್ನು ಶೀಘ್ರ ಪರವಾನಿಗೆ ಲಭ್ಯ. ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ.

ಮೂಡುಬಿದಿರೆ : ಕಳೆದ ನಾಲ್ಕು ವರ್ಷಗಳಿಂದ ಮೂಡುಬಿದಿರೆ ನಗರ ಯೋಜನಾ ಪ್ರಾಧಿಕಾರದ ಬಿಗಿ ನಿಯಮಾವಳಿಗಳಿಂದಾಗಿ ಬಡವರಿಗೆ ಮನೆ ಕಟ್ಟಲು ಪರವಾನಿಗೆ ದೊರೆಯದೆ ಬಹಳ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಇದೀಗ ಮೂಡುಬಿದಿರೆಗೆ ಮಂಗಳೂರು ಮುಡಾ ಝೋನಲ್ ರೆಗ್ಯುಲೇಶನ್ ಅನ್ವಯಿಸಲು ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕರು ಅವಕಾಶ ಕಲ್ಪಿಸಿ ಪರವಾನಿಗೆ ಪಡೆಯಲು ನಿಯಮಗಳನ್ನು ಸರಳಗೊಳಿಸಲಾಗಿದ್ದು ಇನ್ನು ಮುಂದೆ ಮೂಡುಬಿದಿರೆಯಲ್ಲಿ ಮನೆ ನಿರ್ಮಾಣಕ್ಕೆ ಶೀಘ್ರ ಪರವಾನಿಗೆ ಲಭ್ಯವಾಗಲಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದರು. ಈ ಸಮಸ್ಯೆಯ ಬಗ್ಗೆ ಕಳೆದ ಎರಡು ತಿಂಗಳಿಂದ ಸತತ ಪ್ರಯತ್ನ ನಡೆಸಿ ಈ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಮೂಡುಬಿದಿರೆ ಪುರಸಭೆಯಲ್ಲಿ ಕಳೆದ 4 ವರ್ಷಗಳಿಂದ ಮನೆ ಕಟ್ಟಲು ಪರವಾನಿಗೆ ನೀಡದೆ, ಯಾವುದೇ ಕನ್ವರ್ಷನ್ ಸೈಟುಗಳಿಗೆ ಖಾತೆ ನೀಡದೆ ಜನರಿಗೆ ಬಹಳ ತೊಂದರೆಯಾಗಿತ್ತು. ಪುರಸಭೆಗೆ ಒಂದು ಕೋಟಿಗೂ ಮಿಕ್ಕಿ ನಷ್ಟವುಂಟಾಗಿತ್ತು. ಕಟ್ಟಡ ನಿರ್ಮಾಣ ಕಾಮಗಾರಿಗಳೆಲ್ಲ ಬಿದ್ದು ಹೋಗಿ ಗುತ್ತಿಗೆದಾರರು, ಕಾರ್ಮಿಕರು, ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದರು. ಈ ಬಗ್ಗೆ ನುರಿತ ವಕೀಲರು, ವಾಸ್ತುತಜ್ಞರೊಂದಿಗೆ ಚರ್ಚಿಸಿದಾಗ ‘ಮುಡಾ’ ನಿಯಮಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ತೊಂದರೆಯಾಗಿರುವುದು ತಿಳಿದುಬಂದಿತು.

Related posts

Leave a Reply