Header Ads
Header Ads
Breaking News

ಮನೆ ಮನೆಗಳಲ್ಲಿ ಸ್ವಚ್ಚತೆ ಕಾಪಾಡುವ ಉದ್ದೇಶ ಕಳ್ಳಿಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾಲಿಂಗ್ ಬೆಲ್‌ಗೆ ಚಾಲನೆ ಸಚಿವ ರಮಾನಾಥ ರೈ ಅವರ ಮನೆಯಲ್ಲಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಗ್ರಾಮೀಣ ಪ್ರದೇಶದದ ಮನೆ ಮನೆಗಳಲ್ಲಿ ಸ್ವಚ್ಚತೆಯನ್ನು ಕಾಪಾಡುವ ಉದ್ದೇಶದಿಂದ ಕಾಲಿಂಗ್ ಬೆಲ್ ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರಕಿತು.ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿರುವ ಸಚಿವ ರಮಾನಾಥ ರೈ ಅವರ ಮನೆಯಲ್ಲಿ ಸಚಿವರೇ ಇಂದು ಕಾಲಿಂಗ್ ಬೆಲ್‌ಗೆ ಚಾಲನೆ ನೀಡಿದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಚತೆಯನ್ನು ಕಾಪಾಡುವ ಉದ್ದೇಶದಿಂದ ಕಾಲಿಂಗ ಬೆಲ್ ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶದಿಂದಲೇ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ವಿಚಾರ ಎಂದರು.ಅನಂತರ ಜಿಲ್ಲಾ ಪಂಚಾಯತ್ ಸಿಇಒ ಎಂ.ಆರ್ ರವಿ ಅವರು ಮಾತನಾಡಿ, ಇದೊಂದು ವಿನೂತನ ಕಾರ್ಯಕ್ರಮ ಈ ಕಾರ್ಯಕ್ರಮಕ್ಕೆ ರಾಮಕೃಷ್ಣ ಮಿಷನ್ ಮತ್ತು ಸಹ್ಯಾದ್ರಿ ಇಂಜಿನಿಯರಿಂಗ ಕಾಲೇಜಿನವರು ಸಂಪೂರ್ಣ ವೆಚ್ಚವನ್ನು ನೀಡಲಿದ್ದಾರೆ ಎಂದು ಹೇಳಿದರು.ಈ ಸಂದರ್ಭ ಜಿಲ್ಲಾ ಪಂಚಾಯತ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

Leave a Reply