Header Ads
Header Ads
Header Ads
Breaking News

ಮರಳು ನೀತಿಯಿಂದಾಗಿ ಕೂಲಿ ಕಾರ್ಮಿಕರಿಗೆ ತೊಂದರೆ ಜಿಲ್ಲಾಡಳಿತ ಸ್ಯಾಂಡ್ ಮಾಫಿಯಾದ ಪರ ಲಾಭಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಆರೋಪ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮರಳು ನೀತಿಯಿಂದಾಗಿ ಕೂಲಿಕಾರ್ಮಿಕರು ತೀವ್ರವಾಗಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವ್ರು, ಮರಳು ನೀತಿಯಿಂದಾಗಿ ಕಟ್ಟಡದ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಬೇಜವಾಬ್ದಾರಿಯಿಂದಾಗಿ ಸಮಸ್ಯೆ ಉಂಟಾಗುತ್ತಿದೆ. ಜಿಲ್ಲಾಡಳಿತ ಹಾಗೂ ಗಣಿ ಇಲಾಖೆಯವರು ಕಂಪನಿಯ ಪರವಾಗಿ ಲಾಬಿ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವ್ರು ಆರೋಪಿಸಿದ್ರು.

Related posts

Leave a Reply