Header Ads
Breaking News

ಮರಳು ಮಾಫಿಯಾ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು : ಮಂಗಳೂರಿನಲ್ಲಿ ಮಾಜಿ ಶಾಸಕ ಮೊಯ್ದಿನ್ ಬಾವಾ ಆಗ್ರಹ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಗ್ಗಿಲ್ಲದೆ ಮರಳು ಸಾಗಾಣಿಕೆ ನಡೆಯುತ್ತಿದೆ.ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಆರೋಪಿಸಿದ್ದಾರೆ.ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೈಕಂಪಾಡಿ ತಣ್ಣೀರುಬಾವಿ, ನಾಯರ್ ಕುದ್ರಿ, ಮೀನ ಕಲಿಯ, ಅಡ್ಯಾರ್ ಪಡೀಲ್, ಆದ್ಯಪಾಡಿ ಸೇರಿದಂತೆ ಆನೇಕ ಕಡೆ ಅವ್ಯಾಹತವಾಗಿ ಮರಳು ಸಾಗಾಣಿಕೆ ನಡೆಯುತ್ತಿದೆ. ಇದಕ್ಕೆ ಶಾಸಕರ ಕುಮ್ಮಕ್ಕಿದೆ ಎಂಬ ಸಂಶಯ ಮೂಡುತ್ತಿದೆ ಎಂದು ಹೇಳಿದರು. ಮರಳು ಮಾಫಿಯಾ ನಿಲುಗಡೆಗೆ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇನ್ನು ಪ್ರಸ್ತುತ ಶಾಸಕರಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಪಚ್ಚನಾಡಿ, ಸಂತೋಷ್ ನಗರದಲ್ಲಿ ಪ್ರತಿದಿನ ನೀರು ಬಿಡಲಾಗುತ್ತಿತ್ತು. ಆದರೆ ಈಗ ಅನೇಕ ಕಡೆ ಕುಡಿಯುವ ನೀರು ಸಿಗುತ್ತಿಲ್ಲ. ಕ್ಷೇತ್ರದ ಶಾಸಕರು ಮತ್ತು ಕಾರ್ಪೋರೇಟರ್‍ಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದರು.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾರ್ಪೋರೇಟರ್ ಅನಿಲ್, ಉಮೇಶ್, ಮೆಲ್ವಿನ್ ಡಿಸೋಜಾ, ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *