Header Ads
Header Ads
Breaking News

ಮರಳು ಸಮಸ್ಯೆ- ಬಿ.ಸಿ ರೋಡ್‍ನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ

ಬಂಟ್ವಾಳ: ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಮರಳು ಸಮಸ್ಯೆ, ಅಡಕೆ ಕೊಳೆರೋಗದಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ತಕ್ಷಣ ಪರಿಹಾರ ಮತ್ತು ಭೂಪರಿವರ್ತನೆ ಕಾರ್ಯಗಳು ಸರಳಗೊಳಿಸುವಂತೆ ಒತ್ತಾಯಿಸಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಶಾಸಕ ರಾಜೇಶ್ ನಾೈಕ್ ನೇತೃತ್ವದಲ್ಲಿ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ಪ್ರತಿಭಟನಕಾರರನನು ಉದ್ದೇಶಿಸಿ ಮಾತನಾಡಿ ಪ್ರಾಕೃತಿಕ ಕೊಡುಗೆಯಾದ ಮರಳು ಇಂದು ಕಾಳದಂಧೆ ಕೋರರ ಕೈಗೆ ಸಿಕ್ಕಿ ಅದನ್ನೇ ಅವಲಂಬಿಸಿ ಬದುಕುತ್ತಿರುವ ಜನರು ತೊಂದರೆ ಪಡುವತಾಗಿದೆ.

ಬಲಿಷ್ಟರೇ ಮರಳಿನ ವ್ಯಾಪಾರ ಮಾಡುತಿದ್ದು ಮರಳಿನಿಂದಾಗಿ ಈ ಜಿಲ್ಲೆಯಲ್ಲಿ ಗೂಂಡಾಗಿರಿ ಸಂಸ್ಕøತಿ ಉತ್ಪತ್ತಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಜಿ.ಆನಂದ, ದಿನೇಶ್ ಅಮ್ಟೂರು, ರಾಮದಾಸ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಮಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರಾ, ಗೋವಿಂದ ಪ್ರಭು ಮೊದಲಾದವರು ಭಾಗವಹಿಸಿದ್ದರು.

Related posts

Leave a Reply