
ಮರಾಠಾ ಅಭಿವೃದ್ದಿ ನಿಗಮ ಸ್ಥಾಪನೆಯನ್ನ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಉಡುಪಿಯಲ್ಲಿ ನೀರಸ ವ್ಯಕ್ತವಾಗಿದೆ. ರಾಜ್ಯದಲ್ಲಿ ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದರೂ ಸಹ ಉಡುಪಿಯಲ್ಲಿ ಯಾವುದೇ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿರಲಿಲ್ಲ. ಈ ಹಿನ್ನಲೆಯಲ್ಲಿ ಉಡುಪಿ ನಗರ ಸೇರಿದಂತೆ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಅಂಗಡಿಮುಗ್ಗಟ್ಟುಗಳು ಎಂದಿನಂತೆ ತೆರೆದಿತ್ತು. ಜನ ಹಾಗೂ ವಾಹನ ಸಂಚಾರ ಸಾಮಾನ್ಯವಾಗಿದ್ದು, ಉಡುಪಿ ಸರ್ವಿಸ್, ಸಿಟಿ ಹಾಗೂ ಕೆಎಸ್ಸಾರ್ಟಿಸಿ ಬಸ್ಗಳು ಯಾವುದೇ ತೊಂದರೆ ಇಲ್ಲದೇ ಓಡಾಟ ನಡೆಸಿತು. ಯಾವುದೇ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿಲ್ಲ.