Header Ads
Breaking News

“ಮರೆಯಲಾಗದ ದಿವಂಗತ ಬ್ಯಾರಿ ಮಹನೀಯರು”: ಸಾಕ್ಷ್ಯಚಿತ್ರ ಡಿವಿಡಿ ಬಿಡುಗಡೆ ಸಮಾರಂಭ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ “ಮರೆಯಲಾಗದ ದಿವಂಗತ ಬ್ಯಾರಿ ಮಹನೀಯರು” , ಐಸಿಹಾಸಿಕ ಗ್ರಂಥ ಮತ್ತು ಬ್ಯಾರಿ ಹಿರಿತರ ಮನದಾಳದ ಮಾತು ಸಾಕ್ಷ್ಯಚಿತ್ರ ಡಿವಿಡಿ ಬಿಡುಗಡೆ ಸಮಾರಂಭವೂ ಡಿ. 18ರಂದು ನಗರದ ಹಂಪನಕಟ್ಟೆಯ ಹೋಟೆಲ್ ಶ್ರೀನಿವಾಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ರಹೀಂ ಉಚ್ಚಿಲ ಹೇಳಿದ್ರು.

ಈ ಕುರಿತು ಮಂಗಳೂರಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿಮಾತನಾಡಿದ ಅವ್ರು,ದಿವಂಗತ ಬ್ಯಾರಿಮಹನೀಯರ ಐಸಿಹಾಸಿಕ ಗ್ರಂಥ ವನ್ನು ಅಕ್ಷರ ಸಂತ ಪ್ರದ್ಮಶ್ರೀ ಹರೇಕಳ ಹಾಜಬ್ಬ ಅವರು ಬಿಡುಗಡೆ ಮಾಡಲಿದ್ದಾರೆ. ಇನ್ನೂ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ಇವರು ಬ್ಯಾರಿ ಹಿರಿಯರ ಮನದಾಳದ ಮಾತು ಸಾಕ್ಷ್ಯಚಿತ್ರದ ಡಿವಿಡಿ ಬಿಡುಗಡೆಗೊಳಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್, ಬ್ಯಾರಿ ಕಲಾರಂಗದ ಅಧ್ಯಕ್ಷರಾದ ಅಝೀಝ್ ಬೈಕಂಪಾಡಿ,ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ಮುಖ್ಯಸ್ಥರಾದ ಡಾ: ಅಬೂಬಕ್ಕರ್ ಸಿದ್ಧೀಕ್, ಬ್ಯಾರಿ ಅಧ್ಯಯನ ಪೀಠದ ಸದಸ್ಯರಾದ ಎಮ್. ಅಹ್ಮದ್ ಬಾವ ಮೊಹಿದಿನ್ ಸೇರಿದಂತೆ ಮತ್ತಿತರರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.ಸುದ್ಧಿಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಪೂರ್ಣಿಮಾ,ಸದಸ್ಯರಾದ ಶಂಶೀರ್ ಬುಡೋಳಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *