Header Ads
Header Ads
Breaking News

ಮಲ್ಪೆ:ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಚಿವ ಅರುಣ್ ಜೇಟ್ಲಿಯವರನ್ನು ಭೇಟಿಯಾಗಿ ಮನವಿ ಸಲ್ಲಿಕೆ

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮತ್ತು ಅದರಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ಮರಳಿ ಕರೆ ತರಲು ಉನ್ನತ ಮಟ್ಟದ ತನಿಖೆ ಕೈಗೊಳ್ಳುವಂತೆ ಅಖೀಲ ಭಾರತ ಮೀನುಗಾರರ ವೇದಿಕೆ ದಿಲ್ಲಿಯಲ್ಲಿ ಪ್ರಧಾನಿಯವರ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ನಿಯೋಗ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿ ಮೀನುಗಾರಿಕೆ ಸಲಕರಣೆಗಳಿಗೆ ಜಿಎಸ್‌ಟಿ ವಿನಾಯಿತಿ, ನಾಡದೋಣಿಗಳಿಗೆ ರಿಯಾಯಿತಿ ದರದಲ್ಲಿ ಸೀಮೆ ಎಣ್ಣೆ ವಿತರಣೆ, ಕೇಂದ್ರ ದಲ್ಲಿ ಮೀನು ಗಾರಿಕೆ ಸಚಿವಾಲಯ ತೆರೆಯಬೇಕು, ಡೀಸೆಲ್ ರೋಡ್ ಸೆಸ್ ವಿನಾಯಿತಿ ಸಹಿತ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿತು. ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜೇಟ್ಲಿ ಭರವಸೆ ನೀಡಿದರು.ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಅ.ಭಾ. ಮೀನುಗಾರರ ವೇದಿಕೆಯ ಅಧ್ಯಕ್ಷ ವೆಲ್ಜಿಬಾಯಿ ಕೆ. ಮಸಾನಿ, ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ. ಸುವರ್ಣ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಮೊದಲಾದವರು ಹಾಜರಿದ್ದರು.

Related posts

Leave a Reply