Header Ads
Header Ads
Header Ads
Breaking News

ಮಲ್ಪೆ ಪಡುಕೆರೆಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ : ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭಾಗಿ

ಗಡಿಯಲ್ಲಿ ಕಾಯುವ ಸೈನಿಕರಂತೆ ಸ್ವಚ್ಚತಾ ಅಭಿಯಾನಕ್ಕೆ ಯುವಕರು, ವಿದ್ಯಾರ್ಥಿಗಳು ಸೈನಿಕರಾಗಬೇಕು ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ ಕರೆ ನೀಡಿದ್ದಾರೆ.


ಉಡುಪಿಯ ಪಡುಕೆರೆಯಲ್ಲಿ ಜಿಲ್ಲಾಡಳಿತ ಹಾಗೂಮಲ್ಪೆ ಬೀಚ್ ಅಭಿವೃದ್ಧಿ ಸಹಯೋಗದಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿವಿ ಸದಾನಂದ ಗೌಡ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಂಡರು. ಉಡುಪಿ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಸಂಸದೆ ಶೋಭಾ ಕರಂದ್ಲಾಜೆ ಶಾಸಕ ರಘುಪತಿಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾಧಿಕಾರಿ ಜಿ ಜಗದೀಶ್, ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಿದ್ದರು. ಸುಮಾರು ೨ ಕಿಲೋ ಮೀಟರ್ ವ್ಯಾಪ್ತಿವರೆಗೆ ಸಾಗಿ ಸಚಿವರು ಉತ್ಸಾಹದಿಂದ ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು. ಈ ಸಂದರ್ಬದಲ್ಲಿ ಮಾತನಾಡಿದ ಡಿವಿ ಸದಾನಂದ ಗೌಡ ಈಗಾಗಲೇ ದೇಶದಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ಈಗಾಗಲೇ ಬೀಚ್ ಸ್ವಚ್ಚತೆಯಲ್ಲಿ ಸ್ವತಹ: ಪ್ರದಾನಿಗಳು ಭಾಗಿಯಾಗಿ ದೇಶದ ಯುವಕರಿಗೆ ಮಾದರಿಯಾಗಿದ್ದಾರೆ. ಮಕ್ಕಳು ಸ್ವಯಂ ಪ್ರೇರಿತರಾಗಿ ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಬೇಕು. ಆಗ ಸಮಾಜವೇ ಇಂತಹ ಕಾರ್ಯವನ್ನು ಮೆಚ್ಚುತ್ತದೆ. ಗಡಿಯಲ್ಲಿರುವ ಸೈನಿಕರಂತೆ ಸ್ವಚ್ಚತಾ ಅಭಿಯಾನಕ್ಕೆ ಯುವಕರು, ವಿದ್ಯಾರ್ಥಿಗಳು ಸೈನಿಕರಾಗಬೇಕು ಎಂದರು.

Related posts

Leave a Reply

Your email address will not be published. Required fields are marked *