Header Ads
Header Ads
Breaking News

ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಮೀನುಗಾರರು ನಾಪತ್ತೆ

ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಎಂಟು ಮಂದಿ ಮೀನುಗಾರರು ಕಳೆದ ಎಂಟು ದಿನಗಳಿಂದ ಬೋಟು ಸಮೇತ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರನ್ನು ಬೋಟ್ ಮಾಲಕ ಬಡಾನಿಡಿಯೂರಿನ ಚಂದ್ರ ಶೇಖರ, ಮೀನುಗಾರರಾದ ದಾಮೋದರ, ಲಕ್ಷ್ಮಣ್, ಸತೀಶ್, ರವಿ, ಹರೀಶ್, ರಮೇಶ್, ಜೋಗಯ್ಯ ಎಂದು ಗುರುತಿಸಲಾಗಿದೆ.

ಇವರೆಲ್ಲ ಸುವರ್ಣ ತ್ರಿಭುಜ ಎಂಬ ಮೀನುಗಾರಿಕಾ ಬೋಟಿನಲ್ಲಿ ಡಿ.13ರಂದು ರಾತ್ರಿ 11 ಗಂಟೆಗೆ ಸುಮಾರಿಗೆ ಮಲ್ಪೆಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದರು. ಡಿ.೧೫ರ ರಾತ್ರಿ ಒಂದು ಗಂಟೆಯವರೆಗೆ ಸಂಪರ್ಕದಲ್ಲಿದ್ದ ಇವರು ನಂತರ ಸಂಪರ್ಕ ಸಿಗದೇ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಬೋಟು ಹಾಗೂ ಎಂಟು ಮಂದಿಯನ್ನು ಹುಡುಕಾಡಿ ದರೂ ಈವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply