Header Ads
Breaking News

ಮಲ್ಪೆ ಬೀಚ್‌ನಲ್ಲಿ ಅಲೆಗಳ ಮಧ್ಯೆ ಸಿಲುಕಿದ ಪ್ರವಾಸಿಗ : ವೈರಲ್ ಆಗುತ್ತಿರುವ ವೀಡಿಯೋ

 ಮೂರು ದಿನಗಳ ಹಿಂದೆ ಮಲ್ಪೆ ಬೀಚ್‌ನಲ್ಲಿ ಸಮುದ್ರದ ಅಲೆಗಳ ಮಧ್ಯೆ ಸಿಲುಕಿದ ಪ್ರವಾಸಿಗರೊಬ್ಬರನ್ನು ರಕ್ಷಿಸಲಾಗಿದೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ. ಭದ್ರಾವತಿ ಮೂಲದ ಯುವಕರ ತಂಡ ಮಲ್ಪೆ ಬೀಚ್‌ಗೆ ಬಂದಿದ್ದು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ನೀರಿಗಿಳಿದಿದ್ದಾರೆ. ಈ ಸಂದರ್ಭ ಒಬ್ಬ ಯುವಕ ಅಲೆಗಳ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ. ಮಲ್ಪೆಯ ಜೀವ ರಕ್ಷಕ ತಂಡದ ಮಧು ಎಂಬವರು ಯುವಕನನ್ನು ರಕ್ಷಿಸಿದ್ದಾರೆ. ಕೆಲ ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸುಗೊಂಡು ಕಡಲಿನಲ್ಲಿ ಅಲೆಗಳ ಅಬ್ಬರವಾಗಿದೆ. ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಿದ್ದರೂ ಅದನ್ನು ಲೆಕ್ಕಿಸದೆ ಕೆಲ ಪ್ರವಾಸಿಗರು ನೀರಿಗಿಳಿಯುವ ದುಸ್ಸಾಹಸ ಮಾಡುತ್ತಾರೆ. ಸದ್ಯ ಮಳೆ ಮತ್ತು ಗಾಳಿ ಜೋರಾಗಿದ್ದು ಸಮುದ್ರ ಅಪಾಯಕಾರಿಯಾಗಿದೆ. 

Related posts

Leave a Reply

Your email address will not be published. Required fields are marked *