Header Ads
Breaking News

ಮಳೆಗಾಲದಲ್ಲಿ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕೈಗೊಳ್ಳಲು ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ

ದ.ಕ. ಜಿಲ್ಲೆಯ ಮೇಲೆ ಕೊನೆಗೂ ವರುಣ ಕೃಪೆತೋರಿದ್ದು, ಮಳೆಗಾಲ ಆರಂಭಗೊಂಡಿದೆ. ಜೊತೆಗೆ ಮಳೆಗಾಲದಲ್ಲಿ ಅನಾಹುತಗಳು ಎದುರಾಗುವ ಆತಂಕಗಳೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಯಾವುದೇ ರೀತಿಯಲ್ಲಿ ಅನಾಹುತ ಸಂಭವಿಸದ ರೀತಿಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸಭೆ ನಡೆಸಿದ್ರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊನೆಗೂ ಮಳೆಗಾಲ ಆರಂಭಗೊಂಡಿದೆ. ಕಳೆದ ವರುಷ ಮಳೆಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ, ಅನಾಹುತ ಸಂಭವಿಸಿ, ಪ್ರಾಣಹಾನಿಯಾಗಿರುವ ಘಟನೆ ನಡೆದಿದೆ.; ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ಅನಾಹುತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ನಿಟ್ಟಿನಲ್ಲಿ ಜಿಲ್ಲಾಡಳಿತ, ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಸಂಬಂಧಪಟ್ಟ ಇಲಾಖಾಧಿಕಾರಿಗಳ ಜೊತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಆಗ್ನಿಶಾಮಕದಳ, ಗೃಹರಕ್ಷಕದಳ, ಅರಣ್ಯ ಇಲಾಖೆ ಮತ್ತು ಎನ್‌ಡಿಆರ್‌ಎಫ್ ಪಡೆಯ ಅಧಿಕಾರಿಗಳು ಭಾಗವಹಿಸಿದ್ರು. ಮಳೆಯಿಂದ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲು ಇಲಾಖೆ ಸಜ್ಜಾಗಿದೆ. ಜಿಲ್ಲಾಡಳಿತ ಈಗಾಗಲೇ ಸಮರ್ಪಕ ರೀತಿಯ ಪರಿಕರ ನೀಡಲಾಗಿದೆ ಎಂದು ಸಭೆಯಲ್ಲಿ ಇಲಾಖಾವಾರು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಸಚಿವರು, ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಸಂಭವಿಸದ ರೀತಿಯಲ್ಲಿ ಅಧಿಕಾರಿಗಳು ಮುಂಜಾಗೃತೆ ವಹಿಸಿಕೊಳ್ಳಬೇಕೆಂದರು. ಇದರ ಜೊತೆಯಲ್ಲಿಯೇ ಸಚಿವರು , ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಿಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮುಂದಿನ ದಿನಗಳಲ್ಲಿ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ನಾಗರಿಕರಿಗೆ ಯಾವುದೇ ತೊಂದರೆ ಆಗ ರೀತಿಯಲ್ಲಿ ಕ್ರಮ ವಹಿಸಿಕೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಮತ್ತಿತರು ಭಾಗಿಯಾಗಿದ್ರು.

Related posts

Leave a Reply

Your email address will not be published. Required fields are marked *