Header Ads
Breaking News

ದ.ಕ. ಜಿಲ್ಲಾಡಳಿತ ಮತ್ತು ಭಾರತ್ ಸೇವಾದಳದ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿಯವರ 151ನೇ ಜಯಂತಿ ಆಚರಣೆ

ದ.ಕ. ಜಿಲ್ಲಾಡಳಿತ ಮತ್ತು ಭಾರತ್ ಸೇವಾದಳದ ಆಶ್ರಯದಲ್ಲಿ ಕೋವಿಡ್ ನಿಯಮ ಪಾಲನೆಯೊಂದಿಗೆ ಪುರಭವನದ ಎದುರಿನ ಗಾಂಧಿ ಪ್ರತಿಮೆ ಎದುರು ಗಾಂಧಿ ಜಯಂತಿ ಆಚರಣೆ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇತರ ಗಣ್ಯರು ಗಾಂಧಿ ಟೋಪಿ ಧರಿಸಿಕೊಂಡು ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ, ಮಹಾತ್ಮ ಗಾಂಧೀಜಿ ಪ್ರೀತಿ, ನ್ಯಾಯ ಪರವಾಗಿ ನಿಷ್ಠವಾಗಿ ಹೋರಾಡಿ ದೇಶ ಪ್ರೇಮದೊಂದಿಗೆ ಸ್ವಾತಂತ್ರ್ಯ ತಂದವರು. ಶಾಂತಿ ಮತ್ತು ಸೌಹಾರ್ದದೊಂದಿಗೆ ದೇಶವನ್ನು ಒಂದುಗೂಡಿಸಿದ ಅವರ ಆದರ್ಶ ಗಳು ಇಂದಿಗೂ ಪ್ರಸ್ತುತ ಎಂದರು.ಈ ಸಂದರ್ಭ ಮೇಯರ್ ದಿವಾಕರ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮುಡಾ ಅಧ್ಯಕ್ಷ ರವಿಶಂಕರ ಮಿಜಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಿಪ್ರಸಾದ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಡಿಸಿಪಿ ಅರುಣಾಂಶಗಿರಿ, ಎಸಿ ಮದನ್ ಮೋಹನ್, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸ್ಮಾರ್ಟ್ ಸಿಟಿ ಎಂ.ಡಿ. ಮುಹಮ್ಮದ್ ನಝೀರ್, ತಹಶೀಲ್ದಾರ್ ಗುರುಪ್ರಸಾದ್, ಭಾರತ್ ಸೇವಾದಳದ ಕಾರ್ಯದರ್ಶಿ ಟಿ.ಕೆ.ಸುಧೀರ್ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *