Header Ads
Header Ads
Breaking News

ಮಹಾನಗರಪಾಲಿಕೆಯ ಪೌರ ಕಾರ್ಮಿಕರಿಗೆ ವೈದ್ಯಕೀಯ ತಪಾಸಣಾ ಶಿಬಿರ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಯೋಗ. ಮಂಗಳೂರಿನ ಪುರಭವನ ಮಿನಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮ.

ಮಂಗಳೂರಿನ ಮಹಾನಗರ ಪಾಲಿಕೆಯ ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಸಹಯೋಗದೊಂದಿಗೆ ಮಹಾನಗರಪಾಲಿಕೆಯ ಎಲ್ಲಾ ಪೌರ ಕಾರ್ಮಿಕರಿಗೆ ಸಂಪೂರ್ಣ ವೈದ್ಯಕೀಯ ತಪಾಸಣಾ ಶಿಬಿರವು ಪುರಭವನದ ಮಿನಿ ಹಾಲ್‌ನಲ್ಲಿ ನಡೆಯಿತು.ಮಂಗಳೂರಿನ ಪುರಭವನದ ಮಿನಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಮಹಾನಗರ ಪಾಲಿಕೆಯ ಆಯುಕ್ತರಾದ ಮಹಮ್ಮದ್ ನಾಝಿರ್ ಮಾತನಾಡಿ, ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಪಾಲಿಕೆಯ ನೂರಾರು ಪೌರ ಕಾರ್ಮಿಕರು ಶಿಬಿರದ ಪ್ರಯೋಜವನ್ನು ಪಡೆದುಕೊಂಡರು.ಈ ಸಂದರ್ಭ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೆ.ಭಾಸ್ಕರ್, ಉಪ ಮೇಯರ್ ಕೆ.ಮಹಮ್ಮದ್, ಆರೋಗ್ಯಾಧಿಕಾರಿಯಾದ ಡಾ.ಮಂಜಯ್ಯ ಶೆಟ್ಟಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನವೀನ್ ಆರ್.ಡಿಸೋಜಾ, ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರಾದ ಡಾ ಸ್ವಪ್ನ, ಡಾ.ಮೆರಿಜ್, ಡಾ.ಸಿಮೋನ, ಡಿಎಸ್ ಉನೈನ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply