Header Ads
Header Ads
Breaking News

ಮಹಾಮಳೆಗೆ ನನ್ನ ಮೇಲೆ ಟೀಕೆ ಮಾಡುವವರಿಗೆ ಸಾಮಾನ್ಯ ಜ್ಞಾನ ಇಲ್ಲ.ಮಂಗಳೂರಿನಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ ಹೇಳಿಕೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ವಿಪರೀತ ಮಳೆ ಸುರಿದಿದ್ದು, ಆ ಮಹಾಮಳೆಗೆ ನನ್ನ ಮೇಲೆ ಟೀಕೆ ಮಾಡುವವರಿಗೆ ಸಾಮಾನ್ಯ ಜ್ಞಾನ ಇಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಮಂಗಳೂರಿನಲ್ಲಿ ಒಂದೇ ದಿನ 24 ಸೆಂಟಿ ಮೀಟರ್ ಮಳೆಯಾಗಿತ್ತು. ಈ ಮಳೆ ಹಿಂದೆ ಬಂದಿರಲಿಲ್ಲ. ಆದರೆ ಅದ್ಯಾವುದನ್ನು ಗಣನೆಗೆ ತೆಗೆದುಕೊಳ್ಳದೆ ನನ್ನ ಮೇಲೆ ಟೀಕೆ ಮಾಡಲಾಗುತ್ತಿದೆ. ಅದೇ ರೀತಿ ಸಂಸದರು ಮಾಡಿದ ಕಾಮಗಾರಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಇತ್ತು. ಅದಕ್ಕೆ ನಾನು ಸಂಸದರನ್ನು ದೂರುವುದಿಲ್ಲ ಎಂದು ಹೇಳಿದರು.

ವಿಧಾನಸಭೆಯ ಚುನಾವಣೆಯಲ್ಲಿ ಇವಿಎಂ ಮೆಷಿನ್ ಬಗ್ಗೆ ಅನುಮಾನವಿದ್ದು, ನ್ಯಾಯಾಲಯದ ಮೊರೆ ಹೋಗಲು ನಿರ್ಧಾರ ಮಾಡಿದ್ದೇನೆ. ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಕಂಡಿದ್ದೇನೆ ಈ ಬಗ್ಗೆ ನ್ಯಾಯಾಲಯದಲ್ಲಿ ಕಾನೂನು ಸಮರ ಮಾಡಲಾಗುವುದು ಎಂದು ಹೇಳಿದರು.

Related posts

Leave a Reply