Header Ads
Header Ads
Breaking News

ಮಹಾಮಳೆಗೆ ಭಾರೀ ಭೂಕುಸಿತಗೊಂಡ ಚಾರ್ಮಾಡಿ ಘಾಟ್

ಈ ಬಾರಿ ಸುರಿದ ಮಹಾಮಳೆಗೆ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರೀ ಭೂಕುಸಿತದಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಇದೀಗ ಮಳೆ ಕಡಿಮೆಯಾಗುತ್ತದ್ದಂತೆಯೇ ರಸ್ತೆಯಿಂದ ಮಣ್ಣು ತೆಗೆಯುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಮಣ್ಣು ತಗೆಯುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಕೆಲವೆಡೆ ಬಂಡೆಕಲ್ಲುಗಳು ಉರುಳಿ ಬಿದ್ದಿದ್ದು ಅವುಗಳನ್ನು ಒಡೆಯುವ ಕಾರ್ಯ ಮಾಡಲಾಗುತ್ತಿದೆ.ಪ್ರಕೃತಿಯ ಸೊಬಗನ್ನು ನೀಡುವ ಜಲಪಾತಗಳಿಗೆ ಪ್ರಖ್ಯಾತವಾಗಿದ್ದ ಚಾರ್ಮಾಡಿ ಘಾಟ್‌ನಲ್ಲಿ ಇದೀಗ ಎಲ್ಲಿ ನೋಡಿದರಲ್ಲಿ ಬೂಕುಸಿತದ ಭೀಕರ ದೃಶ್ಯಗಳೇ ಕಣಲು ಸಿಗುತ್ತಿದೆ. ಚಾರ್ಮಾಡಿಯಲ್ಲಿ ಒಂದನೇ ತಿರುವಿನಿಂದ ಆರಂಭಿಸಿ ಕೊಟ್ಟಿಗೆಹಾರದಲ್ಲಿ ಮಲಯಮಾರುತದ ವರೆಗೂ ಎಲ್ಲೆಡೆ ಕುಸಿತಗಳಾಗಿವೆ. ಕೆಲ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದ ಭೂ ಕುಸಿತಗಳಾಗಿದ್ದು ರಸ್ತೆಯ ಬಹುಭಾಗವನ್ನೇ ಕಸಿದುಕೊಂಡಿವೆ. ಬೆಟ್ಟದ ಮೇಲಿನ ಜಲಪಾತಗಳು ಕೆಲವು ಕಣ್ಮರೆಯಾಗಿವೆ. ಅಣ್ಣಪ್ಪಬೆಟ್ಟದಿಂದ ಮಲೆಯ ಮಾರುತದ ವರೆಗಿನ ಪ್ರದೇಶಗಳಲ್ಲಿ ಶೇ ೯೦ ಭಾಗದಲ್ಲಿಯೂ ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದೆ ಕಿರು ಸೇತುವೆಗಳು ಬಿರುಕು ಬಿಟ್ಟಿವೆ, ಮೋರಿಗಳು ನೀರುಪಾಲಾಗಿದೆ. ಹೆಚ್ಚಿನ ಪ್ರದೇಶಗಳಲ್ಲಿ ತಡೆಗೋಡೆಗಳಿಗೆ ಹಾನಿಯಾಗಿರುವುದು ಕಂಡು ಬರುತ್ತಿದೆ. ಇದೀಗ ಸಮರೋಪಾದಿಯಲ್ಲಿ ರಸ್ತೆಯನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ತಡೆಗೋಡೆಗಳು ಕುಸಿದು ಹೋಗಿರುವ ಪ್ರದೇಶಗಳಲ್ಲಿ ಮೇಲಿನಿಂದ ಕುಸಿದು ಬಿದ್ದಿರುವ ಮಣ್ಣನ್ನೇ ತಡೆಗೋಡೆಯಂತೆ ಇಡಲಾಗಿದೆ.

Related posts

Leave a Reply

Your email address will not be published. Required fields are marked *