Header Ads
Header Ads
Header Ads
Header Ads
Header Ads
Header Ads
Breaking News

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಇನ್ನಿಲ್ಲ

 

ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರು ಇಹಲೋಕ ತ್ಯಜಿಸಿದ್ದಾರೆ. ಹೃದಯಾಘಾತದಿಂದ ಸುಷ್ಮಾ ಸ್ವರಾಜ್ ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ ವೇಳೆಗೆ ಹೃದಯಾಘಾತಕ್ಕೆ ತುತ್ತಾಗಿದ್ದ ಸುಷ್ಮಾ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುಷ್ಮಾ ಕೊನೆಯುಸಿರೆಳೆದಿದ್ದಾರೆ. ಕಳೆದ ಮೋದಿ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಇಲಾಖೆ ಸಚಿವರಾಗಿ ಸುಷ್ಮಾ ಕೆಲಸ ನಿರ್ವಹಿಸಿ ಇಡೀ ವಿಶ್ವದ ಗಮನ ಸೆಳೆದಿದ್ದರು. ಓಟರ್‌ನಲ್ಲಿ ದೂರು ನಿಡದರೂ ಕ್ಷಿಪ್ರವಾಗಿ ಸ್ಪಂದಿಸುವ ಸಚಿವೆ ಎನ್ನುವ ಹೆಗ್ಗಳಿಕೆ ಪಡೆದುಕೊಂಡಿದ್ದರು. ಇದೀಗ ಕೊನೆಯುಸಿರೆಳೆಯುವ ಮುನ್ನವೂ ಸುಷ್ಮಾ ಟ್ವೀಟ್ ಮಾಡಿರುವುದು ವಿಶೇಷವಾಗಿದೆ. ಕೊನೆಯುಸಿರೆಳೆಯುವ ಕೆಲವೇ ಹೊತ್ತಿಗೆ ಮುನ್ನ ಪ್ರಧಾನಿ ಮೋದಿಯವರಿಗೆ ಟ್ವೀಟ್ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದರು. ಥ್ಯಾಂಕ್ಯೂ ಪ್ರೈಂ ಮಿನಿಸ್ಟರ್. ಥ್ಯಾಂಕ್ಯೂ ವೆರಿಮಚ್. ಐ ವಾಸ್ ವೈಟಿಂಗ್ ಟು ಸೀ ದಿಸ್ ಡೇ ಇನ್ ಮೈ ಲೈಫ್ ಎಂದು ಟ್ವೀಟ್ ಮಾಡಿದ್ದರು. ಇನ್ನು ಸುಷ್ಮಾ ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Related posts

Leave a Reply

Your email address will not be published. Required fields are marked *