Header Ads
Header Ads
Header Ads
Breaking News

ಮಾಜಿ ಪ್ರಧಾನಿ ಎಬಿ ವಾಜಪೇಯಿ ಜನ್ಮದಿನಾಚರಣೆ ವೆನ್ಲಾಕ್ ಆಸ್ಪತ್ರೆಯ ರೋಗಿಗಳಿಗೆ ವೀಲ್ ಚಯರ್ ವಿತರಣೆ ವಿವಿಧ ಆಶ್ರಮಗಳಿಗೆ ಹಣ್ಣು ಹಂಪಲು ವಿತರಣೆ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಕಾರ್ಯಕ್ರಮ

ಮಾಜಿ ಪ್ರಧಾನಿ, ಭಾರತ್ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟು ಹಬ್ಬವನ್ನು ಬಿಜೆಪಿ ವತಿಯಿಂದ ವಿನೂತನವಾಗಿ ಆಚರಿಸಲಾಯಿತು.ಮಂಗಳೂರು ಬಿಜೆಪಿ ದಕ್ಷಿಣ ಮಂಡಲದ ಅಧ್ಯಕ್ಷರಾದ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಯ ರೋಗಿಗಳಿಗೆ 5ವೀಲ್ ಚಯರ್ ಮತ್ತು ಹಣ್ಣುಹಂಪಲು ವಿತರಣೆ ಹಾಗೆಯೇ ಮಂಗಳೂರಿನ ವಿವಿಧ ಆಶ್ರಮಗಳಿಗೆ ಹಣ್ಣು ಹಂಪಲು ವಿತರಣೆ ಮತ್ತು ಆಹಾರ ವಿತರಣೆ ಅಲ್ಲದೆ ಲೇಡಿಗೋಷನ್ ಆಸ್ಪತ್ರೆಗೆ ಹೀಟರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದ್ದಾರೆ.ಇದೇ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ವಾಜಪೇಯಿ ಅವರ ಕನಸನ್ನು ನನಸು ಮಾಡುವ ಕೆಲಸ ಇವತ್ತು ಬಿಜೆಪಿಯಿಂದ ನಡೆಯುತ್ತಿದೆ ಎಂದು ಹೇಳಿದರು. 

ಈ ಸಂದರ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ವೇದವ್ಯಾಸ್ ಕಾಮತ್, ಮಾಜಿ ಶಾಸಕ ಯೋಗೀಶ್ ಭಟ್, ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ ಮತ್ತಿತ್ತರರು ಉಪಸ್ಥಿತರಿದ್ದರು.
ವರದಿ: ನಾಗರಾಜ್ ಮಂಗಳೂರು

Related posts

Leave a Reply