Header Ads
Breaking News

ಮಾಜಿ ಪ್ರಿಯಕರನಿಂದ ಯುವತಿ ಮೇಲೆ ದಾಳಿ : ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸ್ನೇಹಿತರೊಂದಿಗೆ ಯುವತಿ ರೆಸ್ಟೋರೆಂಟ್‍ವೊಂದರಲ್ಲಿ ಕುಳಿತಿದ್ದಾಗ ಆಕೆಯ ಮಾಜಿ ಪ್ರಿಯಕರ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕದ್ರಿಯಲ್ಲಿ ನಡೆದಿದೆ.ಜ.30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್‍ವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಇದರ ಸಿಸಿಟಿವಿ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯುವತಿಯು ತನ್ನ ಮೂವರು ಗೆಳೆಯರೊಂದಿಗೆ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದಾಗ ಏಕಾಏಕಿ ನುಗ್ಗಿದ ನಾಲ್ವರು ಯುವಕರ ತಂಡ ದಾಳಿ ನಡೆಸಿದೆ. ಹೋಟೆಲ್‍ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದು, ಈ ವೇಳೆ ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ.ಈ ಬಗ್ಗೆ ಮಂಗಳೂರು ಪೂರ್ವ (ಕದ್ರಿ)ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *