Header Ads
Header Ads
Breaking News

ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ಗೆ ಜಾಮೀನು ಮಂಜೂರು : 48 ದಿನಗಳ ಜೈಲುವಾಸದಿಂದ ಕೊನೆಗೂ ಮುಕ್ತಿ

ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿಕೆ ಶಿವಕುಮಾರ್‌ಗೆ ದೆಹಲಿ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿದೆ. ಈ ಮೂಲಕ 48 ದಿನಗಳ ಜೈಲು ವಾಸಕ್ಕೆ ಮುಕ್ತಿ ಲಭಿಸಿದೆ.

ಈಡಿ ವಿಶೇಷ ನ್ಯಾಯಾಲಯ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸುರೇಶ್ ಕುಮಾರ್ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿದ್ದರು. ಅನಾರೋಗ್ಯ ಕಾರಣದಿಂದ ಶಿವಕುಮಾರ್‌ಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ ೨೫ ಲಕ್ಷ ರೂ.ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸಬೇಕು. ಪಾಸ್‌ಪೋರ್ಟ್‌ನ್ನು ಒಪ್ಪಿಸಬೇಕು, ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ತಿಳಿಸಿದೆ.

Related posts

Leave a Reply

Your email address will not be published. Required fields are marked *