Header Ads
Breaking News

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಸೇರ್ಪಡೆ?: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧೆ?

ಉಡುಪಿಯ ರಾಜಕಾರಣ ದಿನದಿಂದ ದಿನಕ್ಕೆ ಕೂತೂಹಲ ಮೂಡಿಸುತ್ತಿದೆ. ಮಾಜಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್ ಸೇರುವ ಸಾಧ್ಯತೆ ಇದೆ. ಇಂದು ಅಥವಾ ನಾಳೆ ಅಥವಾ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಜೆಡಿಎಸ್ ವರಿಷ್ಠರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾದ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಈ ಹಿಂದೆ ಪ್ರಮೋದ್ ಮಧ್ವರಾಜ್ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಕ್ರೀಡಾ ಸಚಿವರಾಗಿದ್ದರು. ಬಳಿಕ ನಡೆದ ವಿಧಾನಸಭೆಯ ಚುನಾವಣೆಯಲ್ಲಿ ರಘುಪತಿ ಭಟ್ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದರು.

Related posts

Leave a Reply

Your email address will not be published. Required fields are marked *