Header Ads
Header Ads
Breaking News

ಮಾಜಿ ಸಚಿವ ಬಿ.ಎ ಮೊಹಿದ್ದೀನ್ ಇನ್ನಿಲ್ಲ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ.

ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ಧಿ ಬಿ.ಎ ಮೊಹಿದ್ದಿನ್ ಅವರು ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿದ್ದ ಬಿ.ಎ. ಮೊಹಿದ್ದಿನ್ ಅವರು ಮಂಗಳೂರಿನ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಯಿಂದ ಚೇತರಿಸಿಕೊಂಡ ಬಳಿಕ ಕಳೆದ ವಾರ ಬೆಂಗಳೂರಿಗೆ ತೆರಳಿದ್ದರು. ಅಲ್ಲಿ ಮತ್ತೆ ಅನಾರೋಗ್ಯಕ್ಕೆ ಒಳಗಾದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬಿ.ಎ ಮೊಹಿದ್ದೀನ್ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಹಿತ ಎಲ್ಲಾ ರಾಜಕೀಯ ಮುಖಂಡರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ.

Related posts

Leave a Reply